ಬೆಂಗಳೂರು: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಸೆ. 26ರಲ್ಲಿ ಕರ್ನಾಟಕ ಸಂಪೂರ್ಣ ಬಂದ್ ಆಚರಿಸಲಿದೆ ಎಂದು ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.
ಕಬ್ಬುಬೆಳೆಗಾರರರು ಕರೆ ನೀಡಿರುವ ಸೆಪ್ಟೆಂಬರ್ 5ರ ಬಂದ್ ಬಗ್ಗೆ ನಮಗೆ ಪೂರ್ವ ಮಾಹಿತಿ, ತಯಾರಿ ಇಲ್ಲದ ಕಾರಣ ಬೆಂಬಲ ನೀಡಿಲ್ಲ ಎಂದ ಅವರು ಕಬ್ಬು ಬೆಳೆಗಾರರ ಸಮಸ್ಯೆ ನಿವಾರಿಸುವಲ್ಲಿ ಸರ್ಕಾರದ ನಿರ್ಲಕ್ಷ್ಯ ತೋರುತ್ತಿದೆ. ಈ ಬಗ್ಗೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ನೇತ್ರಾವತಿ ನದಿ ತಿರುಗಿಸುವ ಯೋಜನೆ ವಿರುದ್ಧ ಉಪ್ಪಿ ನಂಗಡಿ ಸೇತುವೆ ಬಳಿ ಸೆ.15ರಂದು ಬೆಳಗ್ಗೆ 10ಕ್ಕೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಹೆದ್ದಾರಿ ತಡೆ ಹಾಗೂ ಜೈಲ್ ಭರೋ ಚಳವಳಿ ನಡೆಸಲಾಗುವುದು ಎಂದು ಉಪ್ಪಿನಂಗಡಿ ನೇತ್ರಾವತಿ ನದಿ ತಿರುವು ಯೋಜನೆ ವಿರೋಧಿ ಹೋರಾಟ ಸಮಿತಿ ಸಂಚಾಲಕ ಡಾ.ನಿರಂಜನ ರೈ ತಿಳಿಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ, ಕಳಸಾ-ಬಂಡೂರಿ ನಾಲಾ ಕಾಮಗಾರಿ ಯೋಜನೆ ಸೇರಿದಂತೆ ಕುಡಿಯುವ ನೀರಿನ ಯೋಜನೆ ಶೀಘ್ರವೇ ಜಾರಿಗೊಳಿಸುವಂತೆ ಆಗ್ರಹಿಸಿ ಸೆಪ್ಟೆಂಬರ್ 26ರಂದು ಕರ್ನಾಟಕ ಬಂದ್ ಕರೆ ನೀಡಲಾಗಿದ್ದು, ಇದಕ್ಕೆ ವಿವಿಧ ಕನ್ನಡ ಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ತಿಳಿಸಿದ್ದಾರೆ.