ಎಂ.ಪಿ ರೇಣುಕಾಚಾರ್ಯ 
ಜಿಲ್ಲಾ ಸುದ್ದಿ

ಎಂ.ಪಿ.ರೇಣುಕಾಚಾರ್ಯ ವಿರುದ್ಧದ ಎಫ್ ಐ ಆರ್ ರದ್ದು

ಸಚಿವರಾಗಿದ್ದ ವೇಳೆ ಅಕ್ರಮ ಆಸ್ತಿ ಸಂಪಾದಿಸಿದ್ದಾರೆಂದು ಆರೋಪ ಎದುರಿಸುತ್ತಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ....

ಬೆಂಗಳೂರು: ಸಚಿವರಾಗಿದ್ದ ವೇಳೆ ಅಕ್ರಮ ಆಸ್ತಿ ಸಂಪಾದಿಸಿದ್ದಾರೆಂದು ಆರೋಪ ಎದುರಿಸುತ್ತಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತು ಅವರ ಮೂವರು ಸಹೋದರರ ವಿರುದ್ಧ ದಾವಣಗೆರೆ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್  ಐಆರ್ ಮತ್ತು ಪ್ರಕರಣದ ತನಿಖೆಗೆ ವಿಶೇಷ ಲೋಕಾಯುಕ್ತ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆಂದು ಗುರುಪಾದಯ್ಯ ಕಬ್ಬಿನಕಂತಿಮಠ ಅವರು ದಾವಣಗೆರೆ ವಿಶೇಷ ಲೋಕಾಯುಕ್ತ ನ್ಯಾಯಾಲಯದಲ್ಲಿ ರೇಣುಕಾಚಾರ್ಯ ಮತ್ತು ಮೂವರು ಸಹೋದರರ ವಿರುದ್ಧ ದೂರು ದಾಖಲಿಸಿದ್ದರು. ತಮ್ಮ ವಿರುದ್ಧ ದಾಖಲಾಗಿದ್ದ ದೂರನ್ನು ರದ್ದುಪಡಿಸುವಂತೆ ಕೋರಿ ರೇಣುಕಾಚಾರ್ಯ ಮತ್ತವರ ಮೂವರು ಸಹೋದರರು ಹೈಕೋರ್ಟ್ ಮೊರೆ ಹೋಗಿದ್ದರು. ಇದರ ವಿಚಾರಣೆ ನಡೆಸಿದ ನ್ಯಾ.ಇಂದ್ರಕಲಾ ಅವರಿದ್ದ ಏಕಸದಸ್ಯ ಪೀಠ, ಎಫ್ಐಆರ್ ರದ್ದುಪಡಿಸಿ ಹೊಸದಾಗಿ ದೂರು ಸಲ್ಲಿಸಲು ದೂರುದಾರನಿಗೆ ಅವಕಾಶ ಕಲ್ಪಿಸಿದೆ. ಅರ್ಜಿದಾರರ ಪರ ವಕೀಲ ಅಸ್ಮತ್ ಪಾಷಾ ವಾದ ಮಂಡಿಸಿ, ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ದೂರು ದಾಖಲಿಸುವ ಸಂದರ್ಭದಲ್ಲಿ ದೂರು ದಾರರು ಪೂರಕ ದಾಖಲೆಗಳು ಹಾಗೂ ಅದನ್ನು ಪರಿಶೀಲಿಸಲಾಗಿದೆ ಎಂಬ ಘೋಷಣಾ ಪ್ರಮಾಣಪತ್ರ ಸಲ್ಲಿಸಬೇಕು. ಆದರೆ, ದೂರುದಾರರು ಈ ಪ್ರಕರಣದಲ್ಲಿ ಆರೋಪಗಳನ್ನು ಪುಷ್ಟೀಕರಿಸುವ ದಾಖಲೆ ಹಾಗೂ ಅದನ್ನು ಪರಿಶೀಲಿಸಿದ ಬಗ್ಗೆ ಪ್ರಮಾಣಪತ್ರ ಸಲ್ಲಿಸಿಲ್ಲ ಎಂದು ವಾದಿಸಿದ್ದರು. ಈ ವಾದ ಸಮ್ಮತಿಸಿದ ಏಕಸದಸ್ಯ ಪೀಠ, ರೇಣುಕಾಚಾರ್ಯ ಮತ್ತವರ ಸಹೋದರರ ವಿರುದಟಛಿ ತನಿಖೆ ನಡೆಸಲು ದಾವಣಗೆರೆ ವಿಶೇಷ ಲೋಕಾಯುಕ್ತ ಕೋರ್ಟ್ ನೀಡಿದ್ದ ಆದೇಶ ಮತ್ತು ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್ ಐಆರ್ ರದ್ದುಗೊಳಿಸಿದೆ. ಜೊತೆಗೆ, ದೂರುದಾರನಿಗೆ ಹೊಸದಾಗಿ ದೂರು ದಾಖಲಿಸಿಲು ಅವಕಾಶ ಕಲ್ಪಿಸಿದೆ.

ಏನಿದು ಪ್ರಕರಣ?
ಎಂ.ಪಿ.ರೇಣುಕಾಚಾರ್ಯ ಅವರು 2004ರಲ್ಲಿ ಚುನಾವಣೆಗೆ ಸ್ಪರ್ಧಿಸುವ ವೇಳೆ ರೂ. 26,07,319 ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಣೆ ಮಾಡಿದ್ದರು. 2008ರಲ್ಲಿ ಸ್ಪರ್ಧಿಸಿದ್ದಾಗ ರೂ. 73,97,828 ಮೌಲ್ಯದ ಆಸ್ತಿ ಮತ್ತು 2013ರಲ್ಲಿ ರೂ. 4,95,32,608 ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ. ಅಂದರೆ, ಹಂತ ಹಂತವಾಗಿ ರೇಣುಕಾಚಾರ್ಯ ಅವರ ಆಸ್ತಿ ಮೊತ್ತ ಹೆಚ್ಚಳವಾಗಿದೆ. ವಿಶೇಷವಾಗಿ 2012ರ ಡಿ.25ರಿಂದ 2013ರ ಮಾ.27ರವರೆಗೆ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದ ವೇಳೆ ಅವರ ಆಸ್ತಿ ಮೊತ್ತ ಅಪಾರ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಖಾಸಗಿ ದೂರಿನಲ್ಲಿ ಆರೋಪಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)