ಕತ್ತಲೆ ಭಾಗ್ಯ ನಿವಾರಣೆಗೆ ಕ್ರಮ: ಗೃಹ ಸಚಿವ ಜಾರ್ಜ್
ರಾಜ್ಯಕ್ಕೆ ಆವರಿಸಿರುವ ಕತ್ತಲೆ ಭಾಗ್ಯ ನಿವಾರಣೆಯಾಗಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಾರ್ಜ್ ಹೇಳಿದರು...
ಚಿಕ್ಕಬಳ್ಳಾಪುರ: ರಾಜ್ಯಕ್ಕೆ ಆವರಿಸಿರುವ ಕತ್ತಲೆ ಭಾಗ್ಯ ನಿವಾರಣೆಯಾಗಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಾರ್ಜ್ ಹೇಳಿದರು.
ಪೊಲೀಸ್ ಅಧೀಕ್ಷಕರ ಕಚೇರಿ ಕಟ್ಟಡ ಕಾಮಗಾರಿಗೆ ಗೃಹ ಸಚಿವರು ಶಂಕುಸ್ಥಾಪನೆ ನೆರವೇರಿಸಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲ ಜಲಾಶಯಗಳಲ್ಲಿ ನೀರಿನ ಕೊರತೆ ಇದ್ದು, ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಸಲು ಪ್ರಯತ್ನ ನಡೆಯುತ್ತಿದೆ. ಇದು ಪೂರ್ಣಗೊಂಡ ನಂತರ ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದರು.
ಬಾಬಾ ಬುಡನ್ ಗಿರಿ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಆದೇಶ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು. ಇನ್ನು ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ರಾವ್ ಅವರು ಕಾನೂನು ಪರದಿಯಲ್ಲಿಯೇ ರಜೆಯ ಮೇಲೆ ತೆರಳಿದ್ದು, ಇದಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ. ಲೋಕಾಯುಕ್ತ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರ ಕುರಿತು ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸುತ್ತಿದೆ ಎಂದು ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.