ಕುತ್ತಿಗೆ ಬಿಗಿದು ಮಹಿಳೆ ಹತ್ಯೆ
ವರ್ತೂರು ಪೊಲಿಸ್ ಠಾಣೆ ವ್ಯಾಪ್ತಿಯ ಬಳಗೆರೆ ಸಮೀಪದ ನೀಲಗರಿ ತೋಪಿನಲ್ಲಿ ಅಪರಿಚಿತ ಮಹಿಳೆಯ ಕತ್ತು ಬಿಗಿದು ಕೊಲೆ ಮಾಡಲಾಗಿದೆ...
ಕೃಷ್ಣರಾಜಪುರ: ವರ್ತೂರು ಪೊಲಿಸ್ ಠಾಣೆ ವ್ಯಾಪ್ತಿಯ ಬಳಗೆರೆ ಸಮೀಪದ ನೀಲಗರಿ ತೋಪಿನಲ್ಲಿ ಅಪರಿಚಿತ ಮಹಿಳೆಯ ಕತ್ತು ಬಿಗಿದು ಕೊಲೆ ಮಾಡಲಾಗಿದೆ.
ಲಿ ಬಣ್ಣದ ಚೂಡಿದಾರ್ ಧರಿಸಿರುವ ಸುಮಾರು 32 ವರ್ಷದ ಮಹಿಳೆಯ ಬಾಯಿಗೆ ದುಷ್ಕರ್ಮಿಗಳು ಬಟ್ಟೆ ತುರುಕಿ ವೇಲ್ನಿಂದ ಕತ್ತು ಬಿಗಿದು ಕೊಲೆ ಮಾಡಿದ್ದಾರೆ. ದನ ಮೇಯಿಸುವವರು ಶವ ಬಿದ್ದಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ ವರ್ತೂರು ಪೊಲೀಸರು, ಮಹಿಳೆ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಮೇಲ್ನೊಟಕ್ಕೆ ಕಂಡು ಬಂದಿಲ್ಲ. ವೈದ್ಯಕೀಯ ಪರೀಕ್ಷೆ ನಂತರವೇ ಕೊಲೆಗೆ ಕಾರಣ ತಿಳಿಯಲಿದೆ ಎಂದು ಹೇಳಿದ್ದಾರೆ.
ಸುತ್ತ ಮುತ್ತಲಿನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯರು ನಾಪತ್ತೆ ಯಾಗಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.