ಧಾರವಾಡ:ಖ್ಯಾತ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹೆಸರು ಮತ್ತು ಸಾಧನೆ ಅಜರಾಮರವಾಗಿ ಉಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಧಾರವಾಡದಲ್ಲಿ ಅವರ ಹೆಸರಿನಲ್ಲಿ ಸಂಶೋಧನ ಕೇಂದ್ರ ಸ್ಥಾಪಿಸಲು ಮುಂದಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ಸಲಹೆಯಂತೆ ಶನಿವಾರ ಸರ್ಕಾರದ ಪ್ರತಿನಿಧಿಯಾಗಿ ವಿಧಾನಪರಿಷತ್ ಸದಸ್ಯ ವೀರಣ್ಣ ಮತ್ತಿಕಟ್ಟಿ ಡಾ.ಕಲಬುರ್ಗಿ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದ ಸದಸ್ಯರೊಂದಿಗೆ ಈ ಕುರಿತು ಸಮಾಲೋಚನೆ ನಡೆಸಿದರು.
ಬೆಂಗಳೂರಿನ ಬಸವ ಸಮಿತಿಯಲ್ಲಿ ಕಲಬುರ್ಗಿ ಅವರ ಸ್ಮಾರಕ ಹಾಗೂ ಧಾರವಾಡದಲ್ಲಿ ಸಂಶೋಧನ ಕೇಂದ್ರ ಸ್ಥಾಪಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ.ಕಲಬುರ್ಗಿ ಅವರ ಹತ್ಯೆ ಸ್ವತಃ ಮುಖ್ಯಮಂತ್ರಿಯವರಿಗೂ ಬೇಸರ ಮೂಡಿಸಿದ್ದು,ಶೀಘ್ರ ಹಂತಕರನ್ನು ಹಿಡಿಯಬೇಕೆಂಬ ಆದೇಶವನ್ನು ಸಿಐಡಿ ಅಧಿಕಾರಿಗಳಿಗೆ ನೀಡಿದ್ದಾರೆ. ಜತೆಗೆ ಕಲಬುರ್ಗಿ ಹೆಸರು ಉಳಿಸುವ ಕೆಲಸ ಮಾಡಬೇಕೆಂಬ ಆಶಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಂದಿದ್ದಾರೆ ಎಂದು ಹೇಳಿದರು.