ರಾಮಚಂದ್ರಾಪುರ ಮಠ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಸುಮನಾ ಹೆಗಡೆ ವಜಾಕ್ಕೆ ಆಗ್ರಹ

ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ ಹಾಗೂ ಮಠದ ವಕ್ತಾರರಂತೆ ವರ್ತಿಸಿ ವಿವಿಧ ರೀತಿಯ ಹೇಳಿಕೆ ನೀಡಿರುವ ರಾಜ್ಯ ಮಹಿಳಾ ಆಯೋಗದ ಸದಸ್ಯರಾದ ಸುಮನಾ ಹೆಗಡೆ ಅವರನ್ನು ವಜಾಗೊಳಿಸುವಂತೆ ವಿವಿಧ ಸಂಘಟನೆಗಳು ಆಗ್ರಹಿಸಿವೆ...

ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ ಹಾಗೂ ಮಠದ ವಕ್ತಾರರಂತೆ ವರ್ತಿಸಿ ವಿವಿಧ ರೀತಿಯ ಹೇಳಿಕೆ ನೀಡಿರುವ ರಾಜ್ಯ ಮಹಿಳಾ ಆಯೋಗದ ಸದಸ್ಯರಾದ  ಸುಮನಾ ಹೆಗಡೆ ಅವರನ್ನು ವಜಾಗೊಳಿಸುವಂತೆ ವಿವಿಧ ಸಂಘಟನೆಗಳು ಆಗ್ರಹಿಸಿವೆ.

ಶ್ರೀಗಳ ವಿರುದ್ಧ ದಾಖಲಾಗಿರುವ ಪ್ರಕರಣ ಇನ್ನೂ ನ್ಯಾಯಾಲಯದಲ್ಲೇ ಇದ್ದು, ಹೀಗಿರುವಾಗ ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ. ಶ್ರೀಗಳ ವಿರುದ್ಧ ಸುಳ್ಳು ಪ್ರಕರಣ ದಾಖಲಾಗಿದೆ.   ಇದರಿಂದ ಭಕ್ತರಿಗೆ ನೋವಾಗಿದೆ ಎಂದು ಮಠದ ವಕ್ತಾರರಂತೆ ಸದಸ್ಯರು ಮಾತನಾಡಿದ್ದಾರೆ. ಅಲ್ಲದೆ ದೂರುದಾರರ ವಿರುದ್ಧ ಸಾರ್ವಜನಿಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಹಿಳಾ  ಆಯೋಗಕ್ಕೆ ದೂರು ನೀಡಿವೆ. ಕೆಲ ಸಂಘಟನೆಗಳು ಆಯೋಗದ ಅಧ್ಯಕ್ಷರಿಗೆ ಇಮೇಲ್ ಮುಖಾಂತರ ದೂರು ದಾಖಲಿಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ  ಮಂಜುಳಾ ಮಾನಸ ಅವರು, ಆಯೋಗದ ಸದಸ್ಯೆ ಸುಮನಾ ಹೆಗಡೆ ವಿರುದ್ಧ ಜನವಾದಿ ಮಹಿಳಾ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ದೂರು ನೀಡಿವೆ. ಅವರ ವಿರುದ್ಧ  ಕ್ರಮಕೈಗೊಳ್ಳಲು ನಮಗೆ ಅಧಿಕಾರವಿಲ್ಲ.

ಹಾಗಾಗಿ ಆ ದೂರನ್ನು ಹಾಗೆಯೇ ಸರ್ಕಾರ, ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗುವುದು. ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಬಿಟ್ಟದ್ದು ಎಂದು ಹೇಳಿದರು. ಸೆ.4ರಂದು ನಗರದ ಶಿಕ್ಷಕ   ಸದನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಸುಮನಾ ಹೆಗಡೆ, ಮಾಧ್ಯಮದಲ್ಲಿ ಸುದ್ದಿಯಾಗಲು, ಪ್ರತಿಷ್ಠಿತರ ಚಾರಿತ್ರ್ಯ ವಧೆ ಮಾಡಲು ಸುಳ್ಳು ಮೊಕದ್ದಮೆ   ದಾಖಲಿಸಲಾಗುತ್ತಿದೆ. ಇದರಿಂದ ಮಠದ ಭಕ್ತರಿಗೆ ನೋವಾಗಿದೆ ಎಂದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT