ಕರ್ನಾಟಕದ ಉದಯ ಕುಮಾರ್ ಶೆಟ್ಟಿ ಅವರನ್ನು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿಯು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಹಾಗೂ ಲೆಜಿಸ್ಲೇಟಿವ್ ಕೌನ್ಸಿಲ್ ಹುದ್ದೆಗೆ ನೇಮಿಸಿದೆ. ಇವರು 2003ರಲ್ಲಿ ಭಾರ ತೀಯ ಕಾನೂನು ಸೇವೆ (ಇಂಡಿಯನ್ ಲೀಗಲ್ ಸರ್ವಿಸ್)ಗೆ ಸೇರಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಇಂತಹ ಪ್ರಮುಖ ಹುದ್ದೇಗೇರಿರುವ ಪ್ರಪ್ರಥಮ ಕನ್ನಡಿಗ ಇವರಾಗಿದ್ದಾರೆ. ಭಾರತೀಯ ಕಾನೂನು ಆಯೋಗದಲ್ಲಿ ಕಾನೂನು ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರೆ
ಉಡುಪಿ ಜಿಲ್ಲಾ ಹೆಗ್ಗುಂಜಿ ಗ್ರಾಮದ ಉದಯ ಕುಮಾರ್ ಶೆಟ್ಟಿಯವರು ಉಡುಪಿ ಜಿಲ್ಲೆಯ ದುರ್ಗಾಪರಮೇಶ್ವರಿ ಪ್ರೌಢಶಾಲೆ, ಬಾರ್ಕೂರಿನ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ.
ಉಡುಪಿ ಜಿಲ್ಲೆ ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಉಡುಪಿಯ ವೈಕುಂಠ ಬಾಳಿಗಾ ಕಾಲೇಜಿನಲ್ಲಿ ಕಾನೂನು ಪದವೀಧರರಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕಾರ್ಮಿಕರ ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆಯ ಈ ಹಿಂದೆ
ಉಡುಪಿಯ ವೈಕುಂಠ ಬಾಳಿಗಾ ಕಾಲೇಜಿನಲ್ಲಿ ಕಾನೂನು ವಿಷಯದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುವು ದನ್ನು ಸ್ಮರಿಸಬಹುದಾಗಿದೆ.