ಲೇಖಕ-ವಿಚಾರವಾದಿ ಕೆಎಸ್ ಭಗವಾನ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಕೆ ಎಸ್ ಭಗವಾನ್‍ಗೆ ಬೆದರಿಕೆ ಪತ್ರ

ಸಾಹಿತಿ ಹಾಗೂ ವಿಚಾರವಾದಿ ಪ್ರೊ.. ಕೆ.ಎಸ್. ಭಗವಾನ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಪತ್ರವೊಂದು ಬುಧವಾರ ಬಂದಿದೆ...

ಮೈಸೂರು: ಸಾಹಿತಿ ಹಾಗೂ ವಿಚಾರವಾದಿ ಪ್ರೊ.. ಕೆ.ಎಸ್. ಭಗವಾನ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಪತ್ರವೊಂದು ಬುಧವಾರ ಬಂದಿದೆ. 

ಮೈಸೂರಿನ ಕುವೆಂಪುನಗರದ ಉದಯರವಿ ರಸ್ತೆಯ ನಿವಾಸಿಯಾದ ಪ್ರೊ.. ಭಗವಾನ್ ಅವರ ವಿಳಾಸಕ್ಕೆ ಮುಚ್ಚಿದ ಲಕೋಟೆಯಲ್ಲಿ ಟೈಪ್ ಮಾಡಿರುವ ಪತ್ರ ಬಂದಿದೆ. ಆ ಪತ್ರದಲ್ಲಿ ನೆಕ್ಸ್ಟ್  ಟಾರ್ಗೆಟ್ ನೀವೆ.. ಅಲರ್ಟ್ ಆಗಿರಿ ಎಂದಿದೆ. ಬರೆದವರಾರೆಂದು ಪತ್ತೆಯಾಗಿಲ್ಲ.

ಲಕೋಟೆ ಮೇಲೆ ಬೆಂಗಳೂರು 560009 ಅಂಚೆ ಕಚೇರಿಯ ಮುದ್ರೆ ಇದೆ. ಹೀಗಾಗಿ, ಈ ಪತ್ರವು ಬೆಂಗಳೂರಿನಿಂದ ಬಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕುವೆಂಪುನಗರ ಠಾಣೆ  ಇನ್ಸ್‍ಪೆಕ್ಟರ್ ಜಿ. ಶೇಖರ್ ತನಿಖೆ ಆರಂಭಿಸಿದ್ದಾರೆ. ಬೆದರಿಕೆ ಹಿನ್ನೆಲೆಯಲ್ಲಿ ಭಗವಾನ್ ಅವರಿಗೆ ನೀಡಲಾಗಿದ್ದ ಭದ್ರತೆ ಹೆಚ್ಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್