ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ರಾಯಚೂರು ಬಂದ್

ಧಾರವಾಡಕ್ಕೆ ಐಐಟಿ ಮಂಜೂರು ಮಾಡಿದ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಹಾಗೂ ರಾಜ್ಯ ಸರ್ಕಾರ ಈ ವಿಚಾರದಲ್ಲಿ ದ್ರೋಹ ಮಾಡಿದೆ ಎಂದು ಆರೋಪಿಸಿ...

ರಾಯಚೂರು ಜಿಲ್ಲಾ ಬಂದ್‍
Rashmi Kasaragodu
Updated On : 11 Sept 2015, 11:13 am

ರಾಯಚೂರು: ಧಾರವಾಡಕ್ಕೆ ಐಐಟಿ ಮಂಜೂರು ಮಾಡಿದ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಹಾಗೂ ರಾಜ್ಯ ಸರ್ಕಾರ ಈ ವಿಚಾರದಲ್ಲಿ ದ್ರೋಹ ಮಾಡಿದೆ ಎಂದು ಆರೋಪಿಸಿ ವಿವಿಧ ಸಂಘಟನೆ ಗಳು ಕರೆ ನೀಡಿದ್ದ ರಾಯಚೂರು ಜಿಲ್ಲಾ ಬಂದ್‍ಗೆ ಗುರುವಾರ ಭಾರಿ ಬೆಂಬಲ ವ್ಯಕ್ತವಾಯಿತು.
ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯು ಧಾರವಾಡಕ್ಕೆಐಐಟಿ ಮಂಜೂರು ಮಾಡಿ ಆದೇಶ ಹೊರಡಿಸಿದ್ದು ಜಿಲ್ಲೆಯ ಸಂಘಟನೆಗಳ ಆಕ್ರೋಶಕ್ಕೆ ದಾರಿ ಮಾಡಿತ್ತು.
ಬಂದ್‍ನಿಂದಾಗಿ ರಾಯಚೂರು ನಗರ ಸೇರಿದಂತೆ ಜಿಲ್ಲಾದ್ಯಂತ ಸಾರಿಗೆ ಸಂಸ್ಥೆಯ ಬಸ್‍ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಶಾಲಾ
-ಕಾಲೇಜುಗಳಿಗಂ ಬಂದ್  ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಜೆ ಘೋಷಿಸಿತ್ತು. ಚಲನಚಿತ್ರ ಮಂದಿರಗಳು, ಪೆಟ್ರೋಲ್ ಬಂಕ್‍ಗಳು ಮುಚ್ಚಿದ್ದವು. ರಸ್ತೆಯಲ್ಲಿ ವಾಹನಗಳ ಸಂಚಾರ ವಿರಳವಾಗಿತ್ತು.

ರಾಯಚೂರು ನಗರ: ಬೆಳಗ್ಗೆಯಿದಲೇ ಐಐಟಿ ಮಂಜೂರಾತಿ ಹೋರಾಟ ಸಮಿತಿ, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ಕಾಂಗ್ರೆಸ್,ಜೆಡಿಎಸ್ ಪ್ರಮುಖರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಸಂಘಟನೆಗಳು ನಗರದ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತದಲ್ಲಿ ಹಾಗೂ ರೈಲು ನಿಲ್ದಾಣದ ವೃತ್ತದಲ್ಲಿಟೈಯರ್‍ಗೆ ಬೆಂಕಿಯಿಟ್ಟು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ-ದರು. ಸಂಸದ ಬಿ.ವಿ. ನಾಯಕ ರೈಲು ನಿಲ್ದಾಣದೊಳಕ್ಕೆ ನೂರಾರು ಕಾರ್ಯಕರ್ತರೊಂದಿಗೆ ನುಗ್ಗಿ ರೈಲು ತಡೆಯುವ ಯತ್ನ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement