(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಹತಾಶ ಬಿಜೆಪಿ ಧರಣಿ

ಬಿಬಿಎಂಪಿ ಸಭಾಂಗಣದಲ್ಲಿ ಮೇಯರ್ ಚುನಾವಣೆಯ ಕಾವು ಹೆಚ್ಚಿದ್ದರೆ, ಹೊರಗೆ ಬಿಜೆಪಿ ಹಾಗೂ ಕಾಂಗ್ರೆಸ್‍ನ ಕಾರ್ಯಕರ್ತರು ಹಾಗೂ ಪಕ್ಷದ ಪ್ರತಿನಿಧಿಗಳು ಪ್ರತಿಭಟನೆಯಲ್ಲಿನಿರತರಾಗಿದ್ದರು. ಬಿಜೆಪಿಯಲ್ಲಿ ಕಾರ್ಪೊರೇಟರ್ ಅಲ್ಲದವರು ಮತದಾನ ಮಾಡಬಾರದು ಎಂದು ಕಾಂಗ್ರೆಸ್ ಪ್ರತಿಭಟಿಸಿದರೆ...

ಬೆಂಗಳೂರು: ಬಿಬಿಎಂಪಿ ಸಭಾಂಗಣದಲ್ಲಿ ಮೇಯರ್ ಚುನಾವಣೆಯ ಕಾವು ಹೆಚ್ಚಿದ್ದರೆ, ಹೊರಗೆ ಬಿಜೆಪಿ ಹಾಗೂ ಕಾಂಗ್ರೆಸ್‍ನ ಕಾರ್ಯಕರ್ತರು ಹಾಗೂ ಪಕ್ಷದ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ನಿರತರಾಗಿದ್ದರು. ಬಿಜೆಪಿಯಲ್ಲಿ ಕಾರ್ಪೊರೇಟರ್ ಅಲ್ಲದವರು ಮತದಾನ ಮಾಡಬಾರದು ಎಂದು ಕಾಂಗ್ರೆಸ್ ಪ್ರತಿಭಟಿಸಿದರೆ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.

ಬಿಜೆಪಿಯ ಸಂಸದರು, ಶಾಸಕರು, ರಾಜ್ಯಸಭೆ ಮತ್ತು ವಿಧಾನಪರಿಷತ್ತಿ ನ ಸದಸ್ಯರು ಮೇಯರ್ ಆಯ್ಕೆ ಚುನಾವಣೆಯಲ್ಲಿ ಮತದಾನ ಮಾಡಬಾರದು ಎಂದು ವಿರೋಧಿಸಿ, ಕಾಂಗ್ರೆಸ್‍ನ `ಕಾನೂನು ಹಾಗೂ ಮಾನವ ಘಟಕ'ದ ಸದಸ್ಯರು ಮುಖಂಡ ಸಿ.ಎಂ. ಧನಂಜಯ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದರು.

ಬಿಜೆಪಿಯವರು ಹೇಳುವುದೊಂದು ಮಾಡುವುದೊಂದು. ಬಿಬಿಎಂಪಿ ಮೇಯರ್ ಚುನಾವಣೆಗೆ ಶಾಸಕ, ಸಂಸದರು, ವಿಧಾನಪರಿಷತ್ ಹಾಗೂ ರಾಜ್ಯಸಭಾ ಸದಸ್ಯರು ಮತದಾನ ಮಾಡುವಂತಿಲ್ಲ ಎಂದು ಬಿಜೆಪಿ ಯವರು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ಆದರೆ ಇಲ್ಲಿ ತಾವಾಗಿಯೇ ಬಂದು ಮತದಾನ ಮಾಡುತ್ತಿದ್ದಾರೆ. ಕೂಡಲೇ ಬಿಬಿಎಂಪಿ ಪೌರಸಭಾಂಗಣ ದಲ್ಲಿರುವ ಎಲ್ಲ ಬಿಜೆಪಿಯ ಶಾಸಕರು, ಸಂಸದರು ಹೊರಬರಬೇಕು. ಮತದಾನ ಮಾಡಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

ಬಿಜೆಪಿ ವಿರೋಧ: ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿರೋಧಿಸಿ ಪುರಭವನದ ಮುಂದೆ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸಿತು.

ಕಾಂಗ್ರೆಸ್ ವಾಮಮಾರ್ಗದಲ್ಲಿ ಹಾಗೂ ಹಿಂಬಾಗಿಲ ಮೂಲಕ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಪಡೆಯುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಎಸಗಿರುವ ಅನ್ಯಾಯ ಎಂದು ಸದಸ್ಯರು ಪ್ರತಿಭಟಿಸಿದರು. ಪ್ರತಿಭಟನೆ ತೀವ್ರವಾಗಿದ್ದರಿಂದ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಮುನಿರಾಜ್ ಗೌಡ, ಚಿತ್ರನಟ ಬುಲೆಟ್ ಪ್ರಕಾಶ್ ಸೇರಿದಂತೆ ಹಲವು ಕಾರ್ಯಕರ್ತರನ್ನು ಬಂಧಿಸಲಾಯಿತು. ಪುರಭವನದ ಮುಂಭಾಗ ಎರಡು ಬಿಎಂಟಿಸಿ ಬಸ್ಸುಗಳಲ್ಲಿ ಕಾರ್ಯಕರ್ತರನ್ನು ಇರಿಸಿ ಕರೆದೊಯ್ಯಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!