ಬಿ.ಎಸ್. ಯಡಿಯೂರಪ್ಪ 
ಜಿಲ್ಲಾ ಸುದ್ದಿ

ಬರ ವಾಸ್ತವ ವರದಿ ಸಲ್ಲಿಸದ ರಾಜ್ಯ ಸರ್ಕಾರ: ಯಡಿಯೂರಪ್ಪ ಆರೋಪ

ರಾಜ್ಯದ ಬರ ಪರಿಸ್ಥಿತಿ, ಬೆಳೆ ನಷ್ಟ ಕುರಿತು ಅಂಕಿ ಅಂಶದ ಸಮೇತ ವಾಸ್ತವ ವರದಿಯನ್ನು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿಯೇ ಇಲ್ಲ...

ಮೈಸೂರು: ರಾಜ್ಯದ ಬರ ಪರಿಸ್ಥಿತಿ, ಬೆಳೆ ನಷ್ಟ ಕುರಿತು ಅಂಕಿ ಅಂಶದ ಸಮೇತ ವಾಸ್ತವ ವರದಿಯನ್ನು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿಯೇ  ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ವಪಕ್ಷಗಳ ನಿಯೋಗವು  ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದಾಗ ಸಕರಾತ್ಮಕವಾಗಿ ಸ್ಪಂದಿಸಿ, ಅಧ್ಯಯನ ತಂಡ ಕಳುಹಿಸಿ ವರದಿ ಪಡೆದು ಹಣ ಬಿಡುಗಡೆ ಮಾಡುವ ಭರವಸೆ ನೀಡಿದ್ದರು. ಆದರೆ, ರಾಜ್ಯಸರ್ಕಾರ ಈವರೆಗೆ ವಾಸ್ತವ ಸಂಗತಿ ತಿಳಿಸುವ ಪ್ರಯತ್ನ ಮಾಡಿಲ್ಲ ಎಂದು ದೂರಿದರು. ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರವು ಅನುದಾನ ನೀಡುತ್ತಿದೆ. ಹೀಗಿದ್ದರೂ ಬಡವರಿಗೆ ಸರಿಯಾಗಿ ಆಹಾರ ಪದಾರ್ಥ ಸರಬರಾಜು ಮಾಡಲು ಆಗುತ್ತಿಲ್ಲ. ಯೋಜನೆಯನ್ನು ಬರೀ ಪ್ರಚಾರಕ್ಕಾಗಿ ಬಳಸಿಕೊಂಡು, ಸತ್ಯ ಮರೆಮಾಚಿ ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಇನ್ನಾದರೂ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡುವುದನ್ನು ರಾಜ್ಯ ಸರ್ಕಾರ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರವು 5 ವರ್ಷದಲ್ಲಿ ರೂ .45,329 ಕೋಟಿ ಸಾಲ ಮಾಡಿತ್ತು. ಆದರೆ, ಹಣಕಾಸು ಬಗ್ಗೆ ಅಪಾರ ಅನುಭವ ಹೊಂದಿರುವ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲಿ ರೂ. 42,329 ಕೋಟಿ ಸಾಲ ಮಾಡಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT