ಜಿಲ್ಲಾ ಸುದ್ದಿ

ಹೋಮಿಯೋಪಥಿಗೆ ಮತ್ತೆ ಬೇಡಿಕೆ: ಡಾ.ಸಚ್ಚಿದಾನಂದ

ಬೆಂಗಳೂರು: ನಾನೂರು ವರ್ಷಗಳಷ್ಟು ಇತಿಹಾಸ ಹೊಂದಿರುವ ಹೋಮಿಯೋಪಥಿ ವೈದ್ಯ ಪದ್ಧತಿಗೆ ಮತ್ತೆ ಬೇಡಿಕೆ ಬಂದಿದ್ದು, ಆಧುನಿಕ ಯುಗದಲ್ಲಿ ಬದಲಾದ ಜೀವನ ಶೈಲಿಯೇ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಕುಲಸಚಿವ ಡಾ.ಎಸ್.ಸಚ್ಚಿದಾನಂದ ಅಭಿಪ್ರಾಯಪಟ್ಟರು.

ಬಸವೇಶ್ವರ ನಗರದಲ್ಲಿರುವ ಸರ್ಕಾರಿ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಸೋಮವಾರ ಏರ್ಪಡಿಸಿ ದ್ದ ಪ್ರಸಕ್ತ ಸಾಲಿನ ಪ್ರಥಮ ವರ್ಷದ
ಬಿಎಚ್‍ಎಂಎಸ್ ಪದವಿ ಕೋರ್ಸಿನ ಪ್ರಾರಂಭೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಆಯುಷ್ ನಿರ್ದೇಶನಾಲಯ ನಿರ್ದೇಶಕ ಸುಭಾಷ್ ಕೆ.ಮಳಕೇಡ್ ಮಾತನಾಡಿ, ಈ ಹೋಮಿಯೋಪಥಿ ಕಾಲೇಜಿಗೆ ಸೇರಿದ 5 ಎಕರೆ ಜಾಗದಲ್ಲಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಮತ್ತು ಸ್ನಾತಕೋತ್ತರ ಕೋರ್ಸಿನ ಪರೀಕ್ಷೆ ನಡೆಸಲು ಅಗತ್ಯ ಕಟ್ಟಡ ನಿರ್ಮಿಸಿಕೊಡುವ ಬಗ್ಗೆ ಸರ್ಕಾರದ ಮುಂದೆ ಪ್ರಸ್ತಾವನೆ ಇದ್ದು, ಸದ್ಯದಲ್ಲಿಯೇ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಭಗವಾನ್ ಬುದ್ಧಿ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಡಿ. ಸತೀಶ್, ಆಯುಷ್ ಇಲಾಖೆಯ ಜಂಟಿ ನಿರ್ದೇಶಕಿ ಡಾ. ಹಸಿಬುನ್ನಿಸಾ, ಸರ್ಕಾರಿ ಹೋಮಿಯೋ ಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಪ್ರಾಂಶುಪಾಲ ಡಾ.ಎ.ಎಲ್. ಪಾಟೀಲ್ ಉಪಸ್ಥಿತರಿದ್ದರು.

SCROLL FOR NEXT