ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ 
ಜಿಲ್ಲಾ ಸುದ್ದಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಜಗಳ: ಓರ್ವ ಸಾವು

ನಗರದಲ್ಲಿರುವ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶುಕ್ರವಾರ ಬೆಳಿಗ್ಗೆ ಆರಂಭವಾದ ಕೈದಿಗಳ ಜಗಳ ಓರ್ವ ಸಾವಿನಲ್ಲಿ...

ಬೆಂಗಳೂರು: ನಗರದಲ್ಲಿರುವ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶುಕ್ರವಾರ ಬೆಳಿಗ್ಗೆ ಆರಂಭವಾದ ಕೈದಿಗಳ ಜಗಳ ಓರ್ವ ಸಾವಿನಲ್ಲಿ ಅಂತ್ಯವಾಗಿದೆ.

ಇಂದು ಬೆಳಿಗ್ಗೆ 8.30ರ ಸುಮಾರಿನಲ್ಲಿ ಜೈಲಿನ ಕ್ಯಾಂಟೀನ್ ನಲ್ಲಿ ಕೈದಿಗಳ ಮಧ್ಯೆ ಜಗಳವಾಗಿದೆ. ಘಟನೆಯಲ್ಲಿ ವಿಚಾರಣಾಧೀನ ಕೈದಿ ತ್ರೀವವಾಗಿ ಗಾಯಗೊಂಡು ಸಾವನಪ್ಪಿದ್ದಾನೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ.ಎಸ್ ಪುರದ ಗಣೇಶ್ (21) ಮೃತ ಕೈದಿ. ಸಹ ಕೈದಿಗಳು ಗಣೇಶನ ಮೇಲೆ ತೀವ್ರ ಹಲ್ಲೆ ಮಾಡಿದ್ದಾರೆ. ಈ ಪರಿಣಾಮದಿಂದಾಗಿ ಗಣೇಶನ ಎದೆ ಮತ್ತು ತಲೆಗೆ ತೀವ್ರ ಗಾಯವಾಗಿದೆ. ತಕ್ಷಣವೇ ಜೈಲು ಆಸ್ಪತ್ರೆಗೆ ಗಣೇಶನನ್ನು ದಾಖಲಾಯಿಸತಾದರೂ, ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ಜೈಲು ಅಧಿಕಾರಿಗಳು ಸತೀಶ್, ಪ್ರಭು, ಪ್ರಶಾಂತ್ ಮತ್ತು ಭರತ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!