ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಟಾಟಾ ಏಸ್ - ಟ್ಯಾಂಕರ್ ಡಿಕ್ಕಿ: 14 ಮಂದಿ ದುರ್ಮರಣ

ಟಾಟಾ ಎಸ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಟಾಟಾ ಏಸ್ ನಲ್ಲಿದ್ದ 14 ಮಂದಿ ಸಾವನ್ನಪ್ಪಿರುವ ಘಟನೆ...

ಬಾಗಲಕೋಟೆ: ಟಾಟಾ ಎಸ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಟಾಟಾ ಏಸ್ ನಲ್ಲಿದ್ದ 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರದಲ್ಲಿ ನಡೆದಿದೆ.

ಮೃತರಲ್ಲಿ 10 ಪುರುಷರು 4 ಮಹಿಳೆಯರು ಸೇರಿದ್ದಾರೆ. 8ಮ0ದಿ ಸ್ಥಳದಲ್ಲೇ ಮೃತಪಟ್ಟರೆ ಉಳಿದವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು 7 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.  ಅವರನ್ನು ಲೋಕಾಪುರ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರೆಲ್ಲಾ ಮುಧೋಳ ತಾಲೂಕಿನ ಸುತ್ತಮುತ್ತಲ ಗ್ರಾಮದವರು ಎನ್ನಲಾಗಿದೆ. ಮುಧೋಳದಲ್ಲಿ ಸಂತೆಗೆಂದು ಬಂದಿದ್ದ ಅವರು ಸಂತೆ ಮುಗಿಸಿ ವಾಪಸ್ ಮನೆಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಟ್ಯಾಂಕರ್ ಚಾಲಕ ಪರಾರಿಯಾಗಿದ್ದಾನೆ. ಮುಧೋಳ ಪೊಲೀಸರು ಆತನಿಗಾಗಿ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT