ಬೆಂಗಳೂರು: ಪ್ರೀತಿ ಹೆಸರಲ್ಲಿ ಅಪ್ರಾಪ್ತಳನ್ನು ಕರೆದೊಯ್ದು 2 ದಿನ ಮನೆಯೊಂದರಲ್ಲಿ ಕೂಡಿ ಹಾಕಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಕೆಂಗೇರಿಯ ಹುಸೇನ್ (24) ಮತ್ತು ಗಂಗೊಂಡನಹಳ್ಳಿಯ ಶಬ್ಬೀರ್ (23) ಬಂಧಿತರು. 16 ವರ್ಷದ ಸಂತ್ರಸ್ತ ಬಾಲಕಿ ನೀಡಿದ ದೂರಿನ ಮೇರೆಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ನೀಡಿದ ಮಾಹಿತಿ ಆಧರಿಸಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಲಾಯಿತು. ಬಾಲಕಿರ,ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.