ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಸಂಪುಟ ಪುನಾರಚನೆ ಮತ್ತಷ್ಟು ವಿಳಂಬ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಳಂಬವಾಗುತ್ತಿರುವುದು ಮತ್ತಷ್ಟು ಸ್ಪಷ್ಟವಾಗಿದೆ. ಕೆಲ ಸಚಿವರಿಗೆ...

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಳಂಬವಾಗುತ್ತಿರುವುದು ಮತ್ತಷ್ಟು ಸ್ಪಷ್ಟವಾಗಿದೆ. ಕೆಲ ಸಚಿವರಿಗೆ ಇದೇ ಕೊನೆ ಸಂಪುಟ ಸಭೆಯಾಗಬಹುದೆಂದು ನಿರೀಕ್ಷಿಸಲಾಗಿದ್ದ ಸೋಮವಾರದ ಸಭೆಯಲ್ಲಿ ಸಿಎಂ ಈ ಬಗ್ಗೆ ಪ್ರಸ್ತಾಪವನ್ನೇ ಮಾಡಿಲ್ಲ.

ಸಿಎಂ ಸಿದ್ದರಾಮಯ್ಯ ಅವರ ಈ ನಡೆ ಹಲವು ಕುತೂಹಲಕ್ಕೆ ಎಡೆಮಾಡಿದೆ. ರಾಷ್ಟ್ರ ರಾಜಕಾರಣದಲ್ಲಿ ಮಗ್ನವಾಗಿರುವ ಹೈಕಮಾಂಡ್ ಜತೆ ಚರ್ಚಿಸದೇ ಸಂಪುಟ ಪುನಾರಚನೆ ಸರ್ಕಸ್ ಬಗ್ಗೆ ಅವರು ಸುಳಿವು ನೀಡಿದ್ದರು ಎನ್ನಲಾಗಿದೆ. ಸಿದ್ದರಾಮಯ್ಯ ಅವರ ಈ ನಡೆ ಉದ್ದೇಶಪೂರ್ವಕವೇ? ಎಂಬ ಮಾತುಗಳೂ ಕೇಳಿಬರುತ್ತಿವೆ.

ಆದಾಗ್ಯೂ ಕಾಂಗ್ರೆಸ್ ಮುಖಂಡರ ಲಾಬಿ ಸೋಮವಾರವೂ ಮುಂದುವರಿದಿತ್ತು. ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಗೆ ಹಲವು ಆಕಾಂಕ್ಷಿಗಳು ಭೇಟಿ ನೀಡಿ ತಮ್ಮ ಹೆಸರನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ.

ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಸೆ.25ರಂದು ದೆಹಲಿಗೆ ಮರಳಲಿದ್ದಾರೆ ಎಂಬ ಮಾಹಿತಿ ಅಧಿಕೃತವಾಗಿದೆ. ಅಲ್ಲಿಗೆ ಸಂಪುಟ ವಿಸ್ತರಣೆ ಪ್ರಕ್ರಿಯೆ ವಿಳಂಬವಾಗುವುದು ದೃಢಪಟ್ಟಂತಾಗಿದೆ.

ಕಾಂಗ್ರೆಸ್ ಮೂಲಗಳ ಪ್ರಕಾರ, ಸಚಿವ ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯನವರೇ ಹೈಕಮಾಂಡ್ ಜತೆ ಚರ್ಚಿಸಿ ಕೆಲ ದಿನಗಳ ಮಟ್ಟಿಗೆ ಸಂಪುಟ ವಿಸ್ತರಣೆ ಮುಂದೂಡುವ ಬಗ್ಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಬರ ಇರುವ ಈ ಸನ್ನಿವೇಶದಲ್ಲಿ ಸಂಪುಟ ಪುನಾರಚನೆ ಮೇಲಾಟ ನಡೆದರೆ ಟೀಕೆ ವ್ಯಕ್ತವಾಗಬಹುದು.ಜತೆಗೆ ವಿಧಾನಸಭೆ ಚುನಾವಣೆ  ಎದುರಿಸುವುದಕ್ಕೆ ಮುನ್ನ ನಡೆಯುವ ಕೊನೆಯ ಸಂಪುಟ ಪುನಾರಚನೆ ಇದಾಗಬೇಕೆ? ಅಥವಾ ಇನ್ನೊಂದು ಸುತ್ತಿನ ಪರಿಷ್ಕರಣೆ ನಡೆಸಬೇಕೇ ಎಂಬ ಬಗ್ಗೆ ಚರ್ಚೆ ನಡೆಯಬೇಕಿದೆ ಎಂಬ ನಿಲುವಿಗೆ ಸಿಎಂ ಬಂದಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?