ಪದ್ಮನಾಭ ನಾಯಕ್ ನಿವಾಸ 
ಜಿಲ್ಲಾ ಸುದ್ದಿ

ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪಂಚಾಯ್ತಿ ಸದಸ್ಯ!

ಗ್ರಾಮ ಪಂಚಾಯತ್ ಸದಸ್ಯರೊಬ್ಬರು ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ದಕ್ಷಿಣ ಕನ್ನಡ...

ಬಂಟ್ವಾಳ(ದಕ್ಷಿಣ ಕನ್ನಡ): ಗ್ರಾಮ ಪಂಚಾಯತ್ ಸದಸ್ಯರೊಬ್ಬರು ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದಲ್ಲಿ ನಡೆದಿದೆ.

ಮಂಚಿ ಗ್ರಾಮ ಪಂಚಾಯತ್ ಸದಸ್ಯ ಪದ್ಮನಾಭ ನಾಯಕ್(46) ತಮ್ಮ ಪತ್ನಿ ಪುಷ್ಪಾವತಿ ಹಾಗೂ ಮಕ್ಕಳಾದ ಪೃಥ್ವಿ(6), ಪೂರ್ವಿ(4)ಯನ್ನು ಬರ್ಬರವಾಗಿ ಹತ್ಯೆ ಮಾಡಿ, ಬಳಿಕ ತಾನೂ ಕತ್ತುಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪದ್ಮನಾಭ ಅವರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು ಎನ್ನಲಾಗುತ್ತಿದ್ದು, ಇದರಿಂದ ಮನನೊಂದು ನಿನ್ನೆ ರಾತ್ರಿ ಮಲಗಿದ್ದ ಪತ್ನಿ ಹಾಗೂ ಮಕ್ಕಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ನಂತರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದು ಬೆಳಗ್ಗೆ ಮನೆ ಬಾಗಿಲು ತೆರೆದಾಗ ನಾಲ್ವರ ಶವ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಸ್ಥಳಕ್ಕೆ ಬಂಟ್ವಾಳ ಠಾಣಾ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!