ಬಕ್ರೀದ್ ಹಬ್ಬ: ಇಂದು ನಾಳೆ ಹೈಕೋರ್ಟ್ ರಜೆ
ಬಕ್ರಿದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್ಗೆ ಸೆ.24 ಮತ್ತು 25ರಂದು ರಜೆ ಘೋಷಿಸಲಾಗಿದೆ. ಬಕ್ರಿದ್ಗೆ ಈ ಮೊದಲು ಗುರುವಾರ...
ಬೆಂಗಳೂರು: ಬಕ್ರಿದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್ಗೆ ಸೆ.24 ಮತ್ತು 25ರಂದು ರಜೆ ಘೋಷಿಸಲಾಗಿದೆ. ಬಕ್ರಿದ್ಗೆ ಈ ಮೊದಲು ಗುರುವಾರ ರಜೆ ಘೋಷಣೆ ಆಗಿತ್ತು.
ಬಳಿಕ ರಾಜ್ಯ ಸರ್ಕಾರ ಆ ರಜೆಯನ್ನು ಶುಕ್ರವಾರಕ್ಕೆ ಮುಂದೂಡಿರುವ ಕಾರಣ ಎರಡೂ ದಿನ ರಜೆ ಘೋಷಿಸಲಾಗಿದೆ. ಗುರುವಾರ ಪಡೆಯುವ ರಜೆಗೆ ಪರಿಹಾರವಾಗಿ ಯಾವುದಾದರೂ ಶನಿವಾರದಂದು ಹೈಕೋರ್ಟ್ ಕಾರ್ಯ ನಿರ್ವಹಿಸಲಿದೆ.
ಈ ಕುರಿತು ಫುಲ್ ಕೋರ್ಟ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ರಿಜಿಸ್ಟ್ರಾರ್ ಜನರಲ್ ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಈ ಹಿಂದೆ ಒಂದು ದಿನ ಪಡೆದಿದ್ದ ರಜೆಗೆ ಪರಿಹಾರವಾಗಿ ಶನಿವಾರ (ಸೆ.26ರಂದು) ಹೈಕೋರ್ಟ್ ಕಾರ್ಯ ನಿರ್ವಹಿಸಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.