ಜಿಲ್ಲಾ ಸುದ್ದಿ

ಕರ್ನಾಟಕ ಬಂದ್ ಭಾಗಶಃ ಯಶಸ್ವಿ : ಸಹಜ ಸ್ಥಿತಿಗೆ ಮರಳಿದ ಜನಜೀವನ

Srinivas Rao BV

ಬೆಂಗಳೂರು: ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡಪರ, ರೈತ ಹಾಗೂ ವಾಣಿಜ್ಯ ಸಂಘಟನೆಗಳು ಕರೆ ಶನಿವಾರ ನೀಡಿದ್ದ ಕರ್ನಾಟಕ ಬಂದ್‍ ಮುಕ್ತಾಯಗೊಂಡಿದ್ದು ಜನಜೀವನ ಸಹಜ ಸ್ಥಿತಿಗೆ ಮರಳಿದೆ.
ಬೆಳಿಗ್ಗೆಯಿಂದ ರಸ್ತೆಗಿಳಿಯದ ಸರ್ಕಾರಿ ಬಸ್, ಆಟೋಗಳು ಸಂಚಾರ ಪ್ರಾರಂಭಿಸಿವೆ. ಮೆಜಸ್ಟಿಕ್ ನಲ್ಲಿ ಬಿಎಂಟಿಸಿ ಬಸ್ ಗಳು ಎಂದಿನಂತೆ ಕಾರ್ಯಾರಂಭ ಮಾಡಿವೆ. ಬಂದ್ ಹಿನ್ನೆಲೆಯಲ್ಲಿ ಮಾರ್ಕೆಟ್ ನಲ್ಲಿ ಸ್ಥಗಿತಗೊಂಡಿದ್ದ ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ವಹಿವಾಟು ಸಹಜ ಸ್ಥಿತಿಗೆ ಮರಳಿವೆ.
ಬೆಳಿಗ್ಗೆ 6 ರಿಂದ ಸಂಜೆ 6 ವರೆಗೆ ಬಂದ್ ಗೆ ಕರೆ ನೀಡಲಾಗಿತ್ತಾದರೂ, ಎರಡು ಗಂಟೆ ಮುಂಚಿತವಾಗಿಯೇ ಬಂದ್ ಮುಕ್ತಾಯಗೊಂಡಿದ್ದು ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಇನ್ನು ಕಳಸಾಬಂಡೂರಿ ನಾಲಾ ಯೋಜನೆಯ ಅನುಷ್ಠಾನಕ್ಕೆ ಆಗ್ರಹಿಸಿ ರೈತಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ಭಾಗಶಃ  ಯಶಸ್ವಿಯಾಗಿದೆ.

SCROLL FOR NEXT