ಬೆಂಗಳೂರು: ಲೋಕಾಯುಕ್ತ ರಿಜಿಸ್ಟ್ರಾರ್ ಹುದ್ದೆಗೆ ಐಎಎಸ್ ಅಧಿಕಾರಿ ಡಾ. ಪಿ.ಸಿ. ಜಾಫರ್ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಸರ್ಕಾರ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ 2 ವಾರ ಕಾಲಾವಕಾಶ ನೀಡಿದೆ.
ಜಾಫರ್ನೇಮಕ ಪ್ರಶ್ನಿಸಿ ವಕೀಲ ಆನಂದಮೂತಿರ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಶನಿವಾರ ಸರ್ಕಾರಿ ವಕೀ-ಲರು, ಅರ್ಜಿ ಕುರಿತು ಆಕ್ಷೇಪಣೆಗಳು ಸಿದ್ಧಗೊಂಡಿಲ್ಲ. ಹೀಗಾಗಿ, ಆಕ್ಷೇಪಣೆ ಸಲ್ಲಿಕೆಗೆ ಎರಡು ವಾರ ಸಮಯ ನೀಡಬೇಕು ಎಂದು ಕೋರಿದರು.
ಮನವಿ ಪರಿಗಣಿಸಿದ ಹಂಗಾಮಿ ಮುಖ್ಯ ನ್ಯಾ.ಎಸ್.ಕೆ.ಮುಖರ್ಜಿ, ನ್ಯಾ.ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ, ಆಕ್ಷೇಪಣೆ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.