ಕೋಲಾರ: ಇಬ್ಬರು ಹೆಣ್ಣಮಕ್ಕಳನ್ನು ಹಳ್ಳಕ್ಕೆ ತಳ್ಳಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದ ಬೆಳಗಾನ ಹಳ್ಳಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ಶ್ಯಾಮಲ(25) ಮಕ್ಕಳಾದ ಸೌಮ್ಯ(3) ವರ್ಷ(1) ಮೃತ ದುರ್ದೈವಿಗಳು. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ತಾಯಿ ಇಬ್ಬರು ಮಕ್ಕಳನ್ನು ಹಳ್ಳಕ್ಕೆ ತಳ್ಳಿ ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸೋಮೇಶ್ ಎಂಬುವವನ್ನು ಮದುವೆಯಾಗಿದ್ದ ಶ್ಯಾಮಲ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದಳು. ಈ ಸಂಬಂಧ ಕೊಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.