ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಸಂಪುಟ ಸರ್ಜರಿ ಮತ್ತೆ ದಿಲ್ಲಿಗೆ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ವಿಚಾರವಾಗಿ ಮತ್ತೆ ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ವಿಚಾರವಾಗಿ ಮತ್ತೆ ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ವಿಸ್ತರಣೆ ವಿಚಾರವಾಗಿಯೇ ಚರ್ಚಿಸಲು ದೆಹಲಿಗೆ ತೆರಳಿದ್ದೆ. ಆದರೆ ಆ ಸಂದರ್ಭದಲ್ಲಿ ಪಕ್ಷದ ಉಪಾಧ್ಯಕ್ಷರಾದ ರಾಹುಲ್ ಗಾಂಧಿ ಅವರು ಇರಲಿಲ್ಲ. ಅದೇರೀತಿ ರಾಜ್ಯಉಸ್ತುವಾರಿಯಾಗಿರುವ ದಿಗ್ವಿಜಯ ಸಿಂಗ್ ಕೂಡ ಇರಲಿಲ್ಲ. ಆದ್ದರಿಂದ ಆ ಬಗ್ಗೆ ಚರ್ಚೆಸಲು ಸಾಧ್ಯವಾಗಲಿಲ್ಲ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಸಂಪುಟ ವಿಸ್ತರಣೆಗೆ ಜಿಲ್ಲಾ ಪಂಚಾಯಿತಿ, ಪಿತೃಪಕ್ಷ ಅಂತಾ ಅಲ್ಲ. ಸದ್ಯದಲ್ಲೇ ಮತ್ತೆ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಜತೆ ಚರ್ಚಿಸಲಾಗುವುದು. ಅದು ದಿಗ್ವಿಜಯಸಿಂಗ್ ಅಮೆರಿಕಾದಿಂದ ವಾಪಸಾದ ನಂತರ ಎಂದು ಹೇಳಿದರು.

ಸ್ಥಾನ ಉಳಿಸಿಕೊಳ್ಳುವ ವಿಶ್ವಾಸ
ಜನರ ಮಧ್ಯೆ ಇದ್ದು, ಅವರ ಸಮಸ್ಯೆ ಬಗೆಹರಿಸುವ ತಮ್ಮನ್ನು ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಉಳಿಸಿಕೊಳ್ಳುತ್ತಾರೆಂಬ ನಂಬಿಕೆ ತಮಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ. ಜಯಚಂದ್ರ ತಿಳಿಸಿದರು.

ಅವರು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ತಾವು ಜನರ ಮಧ್ಯದಲ್ಲೇ ಬೆಳೆದು ಬಂದವನು. ಜನರ ಸಮಸ್ಯೆ ಅರಿತು ಅವರಿಗೆ ಸ್ಪಂದಿಸುತ್ತಿರುವವನು. ಹೀಗಾಗಿ ಸಂಪುಟ ಪುನರಚನೆ ಅಥವಾ ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಸಿಗುವ ನಂಬಿಕೆಯಿದೆ. ಸಂಪುಟ ವಿಸ್ತರಣೆ, ಪುನರಚನೆ ಕುರಿತಂತೆ ತಮಗೆ ಮಾಹಿತಿಯಿಲ್ಲ , ಅದೆಲ್ಲಾ ಹೈಕಮಾಂಡ್‍ಗೆ ಬಿಟ್ಟಿದ್ದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ