ಪ್ರಣವಾನಂದ ಸ್ವಾಮೀಜಿ 
ಜಿಲ್ಲಾ ಸುದ್ದಿ

ಹುಬ್ಬಳ್ಳಿಯಲ್ಲಿ ಮತ್ತೆ ಪ್ರಣವಾನಂದ ಶ್ರೀ ವಿಚಾರಣೆ

ಸಿಐಡಿ ಅಧಿಕಾರಿಗಳ ತಂಡ ಮಂಗಳವಾರ ರಾಣಿಬೆನ್ನೂರು ತಾಲೂಕು ಆರೆಮಲ್ಲಾಪುರದ ಪ್ರಣವಾನಂದ ಸ್ವಾಮೀಜಿ ....

ಧಾರವಾಡ: ಸಾಹಿತಿ ಡಾ.ಎಂ.ಎಂ ಕಲಬುರ್ಗಿ  ಹತ್ಯೆಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡ ಮಂಗಳವಾರ ರಾಣಿಬೆನ್ನೂರು ತಾಲೂಕು ಆರೆಮಲ್ಲಾಪುರದ ಪ್ರಣವಾನಂದ ಸ್ವಾಮೀಜಿ ಅವರನ್ನು ಹುಬ್ಬಳ್ಳಿಯಲ್ಲಿ  ಮತ್ತೊಮ್ಮೆ ವಿಚಾರಣೆಗೆ ಒಳಪಡಿಸಿದೆ.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸಂಜೆ 5ರಿಂದ 7 ವರೆಗೆ ಸುಮಾರು ಎರಡು ತಾಸು ವಿಚಾರಣೆ ನಡೆಸಿದ ಎಸ್ಪಿ ಡಿ.ಸಿ ರಾಜಪ್ಪ ನೇತೃತ್ವದ  ಸಿಐಡಿ ತಂಡ, ಅವರ ಮೊಬೈಲ್ ಹಾಗೂ ಲ್ಯಾಪ್ ಟ್ಯಾಪ್ ಅನ್ನು ಪರಿಶೀಲನೆಗೆ ಒಳಪಡಿಸಿತು.  ಬಳಿಕ ಅವುಗಳನ್ನು ಮರಳಿಸಿದ ಅಧಿಕಾರಿಗಳು ಮತ್ತೆ ವಿಚಾರಣೆಗೆ ಕರೆದಾಗ ಹಾಜರಾಗುವಂತೆ ಸೂಚಿಸಿದೆ.

ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಣಾವಾನಂದ  ಸ್ವಾಮೀಜಿ ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ಸಿಐಡಿ  ಅಧಿಕಾರಿಗಳು ವಿನಾಕಾರಣ ತಮ್ಮನ್ನು ಆಗಾಗ ಕರೆಸಿ ವಿಚಾರಣೆ ಮಾಡುತ್ತಿದ್ದಾರೆ. ಈ ಸಲ ಆರೋಪಿಗಳ ಬಗ್ಗೆ ಏನಾದರೂ ಮಾಹಿತಿ ಇದೆಯೇ ಎಂದು ಕೇಳಿದ್ದಾರೆ. ಆದರೆ ಸ್ವಾಮೀಜಿಯಾಗಿ ತಾವು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ವಿಧ್ವಂಸಕ ಕೃತ್ಯಗಳನ್ನು ನಡೆಸುವವರ ಸಂಪರ್ಕ ಇಲ್ಲ. ವಿನಾಕಾರಣ ತಮ್ಮ ಮೇಲೆ ಯಾರೋ ಆರೋಪ ಹೊರಿಸುತ್ತಿದ್ದಾರೆ. ಕಲಬುರ್ಗಿ ಅವರ ಕೊಲೆ ಬಗ್ಗೆ ತಮಗೇನು ಗೊತ್ತಿಲ್ಲವೆಂದು ತಿಳಿಸಿದ್ದೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT