(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಬೆಂಕಿ ಆಕಸ್ಮಿಕಕ್ಕೆ 8 ಶಾಲಾ ಬಸ್ ಭಸ್ಮ

ಕೋಣನಕುಂಟೆ ಸಮೀಪದ ಪ್ರತಿಷ್ಠಿತ ಖಾಸಗಿ ಶಾಲೆಯ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಎಂಟು ಶಾಲಾ ಬಸ್ ಗಳು ಬೆಂಕಿಗೆ ಆಹುತಿಯಾಗಿವೆ...

ಬೆಂಗಳೂರು: ಕೋಣನಕುಂಟೆ ಸಮೀಪದ ಪ್ರತಿಷ್ಠಿತ ಖಾಸಗಿ ಶಾಲೆಯ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಎಂಟು ಶಾಲಾ ಬಸ್ ಗಳು ಬೆಂಕಿಗೆ ಆಹುತಿಯಾಗಿವೆ.

ಇಲ್ಲಿನ ದೆಹಲಿ ಪಬ್ಲಿಕ್ ಶಾಲಾ ಆವರಣದಲ್ಲಿ ನಿಲ್ಲಿಸಿದ್ದ ಬಸ್‍ಗಳ ಪೈಕಿ ಒಂದು ಬಸ್‍ನಲ್ಲಿ ಸಂಜೆ 6.45ರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಒಂದರ ಪಕ್ಕ ಒಂದು ಬಸ್ ನಿಂತಿದ್ದ ಕಾರಣ ಬೆಂಕಿ ವೇಗವಾಗಿ ವ್ಯಾಪಿಸತೊಡಗಿತು. ಕೂಡಲೇ ಶಾಲಾ ಭದ್ರತಾ ಸಿಬ್ಬಂದಿ, ಅಗ್ನಿಶಾಮಕ ಮತ್ತು ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ತಿಳಿಸಿದ್ದಾರೆ.

ಈ ಮಾಹಿತಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ನಾಲ್ಕು ವಾಹನಗಳಲ್ಲಿ ತೆರಳಿ ಬೆಂಕಿ ನಂದಿಸಿದ್ದಾರೆ. ಈ ಅವಘಡಕ್ಕೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video