ಮುಲ್ಕಿ: ಅನಾರೋಗ್ಯದಿಂದ ಬಳಲುತ್ತಿದ್ದ ಕಂಬಳ ಪ್ರೇಮಿ ಹಾಗೂ ರಾಜ್ಯಪ್ರಶಸ್ತಿ ವಿಜೇತ ಪೊಯ್ಯೊಟ್ಟು ಸದಾಶಿವ ಸಾಲಿಯಾನ್ ಅವರು ಗುರುವಾರ ನಿಧನರಾಗಿದ್ದಾರೆ.
ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪೊಯ್ಯೊಟ್ಟು ಸದಾಶಿವ ಸಾಲಿಯಾನ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆಂದು ತಿಳಿದುಬಂದಿದೆ.
ಪೊಯ್ಯೊಟ್ಟು ಸದಾಶಿವ ಸಾಲಿಯಾನ್ ಅವರು ತಮ್ಮ ಕಂಬಳದ ಕೋಣ ನಾಗರಾಜನ ಮೂಲಕ ಹೆಚ್ಚು ಪ್ರಸಿದ್ಧಿಗೆ ಬಂದವರು. ಇದು ಸಾಲಿಯಾನ್ ಅವರಿಗೆ ಸುಮಾರು 115 ಪಾರಿತೋಷಕಗಳನ್ನು ಗೆದ್ದುಕೊಟ್ಟಿತ್ತು ಎನ್ನುವುದು ವಿಶೇಷ. ಕಂಬಳ ಕ್ಷೇತ್ರದ ಅವರ ಸಾಧನೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.
ಪೊಯ್ಯೊಟ್ಟು ಸದಾಶಿವ ಸಾಲಿಯಾನ್ ಅವರ ಅಂತ್ಯಕ್ರಿಯೆಯು ನಾಳೆ ಬೆಳಗ್ಗೆ ಮುಲ್ಕಿಯಲ್ಲಿರುವ ಅವರ ನಿವಾಸದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.