ಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಮತ್ತು ಕೇಂದ್ರ ಸಚಿವರಾದ ಸದಾನಂದ ಗೌಡ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಆರೆಸ್ಸೆಸ್ ಸಭೆಯಲ್ಲಿ ಮಹದಾಯಿ, ಎತ್ತಿನಹೊಳೆ, ದತ್ತಪೀಠ ಪ್ರಸ್ತಾಪ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಂಗ ಸಂಸ್ಥೆಗಳ ಸಮನ್ವಯ ಸಭೆ ಬುಧವಾರ ನಡೆಯಿತು. ಬಿಜೆಪಿ ಸೇರಿದಂತೆ 30ಕ್ಕೂ ಹೆಚ್ಚು ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡು ವರದಿಗಳನ್ನು ಮಂಡಿಸಿ ಮಾಹಿತಿ ವಿನಿಮಯ ಮಾಡಿಕೊಂಡರು...

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಂಗ ಸಂಸ್ಥೆಗಳ ಸಮನ್ವಯ ಸಭೆ ಬುಧವಾರ ನಡೆಯಿತು. ಬಿಜೆಪಿ ಸೇರಿದಂತೆ 30ಕ್ಕೂ ಹೆಚ್ಚು ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ
ಪಾಲ್ಗೊಂಡು ವರದಿಗಳನ್ನು ಮಂಡಿಸಿ ಮಾಹಿತಿ ವಿನಿಮಯ ಮಾಡಿಕೊಂಡರು.

ಕಳಸಾಬಂಡೂರಿ, ಎತ್ತಿನಹೊಳೆ, ದತ್ತ ಪೀಠದಂತಹ ಪ್ರಾದೇಶಿಕ ವಿಚಾರಗಳು ಸಭೆಯಲ್ಲಿ ಚರ್ಚೆಗೆ ಬಂದವು. ಜೊತೆಗೆ ಸಂಘಟನೆಯನ್ನು ಬಲಪಡಿಸುವುದು, ಅದಕ್ಕಾಗಿನ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಯಿತೆಂದು ಮೂಲಗಳು ತಿಳಿಸಿವೆ. ಬಿಜೆಪಿ ಕಡೆಯಿಂದ ರೈತ ಸಾಂತ್ವನ ಯಾತ್ರೆ, ರೈತ ಚೈತನ್ಯ ಯಾತ್ರೆ ಕುರಿತಂತೆ ಪ್ರಮುಖರು ವರದಿ ಮುಂದಿಟ್ಟರು. ಶಿಕ್ಷಣದಲ್ಲಿ ಭಾರತೀಯತೆ, ಪ್ಲಾಸ್ಟಿಕ್ ಮುಕ್ತವಲಯ, ಮಾತೃಭಾಷೆ ಬಳಕೆ, ಜ.12ರಂದು ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ ಸೇರಿದಂತೆ ವಿವಿಧ ವಿಚಾರವಾಗಿ ಮಾಹಿತಿಗಳ ವಿನಿಮಯ ನಡೆಯಿತು.

ಸಂಘದ ಕ್ಷೇತ್ರೀಯ ಪ್ರಮುಖರಾದ ವಿ.ನಾಗರಾಜ್, ಶ್ಯಾಂಕುಮಾರ್ ಅವರು ಸಭೆಯ ನೇತೃತ್ವ ವಹಿಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರಾದ ಸದಾನಂದ ಗೌಡ, ವಕ್ತಾರ ಸಿ.ಟಿ.ರವಿ ಸೇರಿದಂತೆ ಪ್ರಮುಖರು ಸಭೆಯಲ್ಲಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!