ಬೆಂಗಳೂರು: ಟ್ರಾಫಿಕ್ ಸಬ್ ಇನ್ಸ್ ಪೆಕ್ಟರ್ ಮೇಲೆ ಹಲ್ಲೆಗೆ ಯತ್ನಿಸಿದ ಮೂವರು ಆರೋಪಿಗಳನ್ನು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ರಾಮಮೂರ್ತಿನಗರ ಹಾಗೂ ಬಾಣಸವಾಡಿ ನಿವಾಸಿಗಳಾದ ಆನಂದ್(26), ಸರವಣನ್(30) ಮತ್ತು ಎಲ್ವಿನ್ (23) ಬಂಧಿತರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ ಎಎಲ್ ವಿಮಾನ ನಿಲ್ಧಾಣಕ್ಕೆ ಹೋಗುವ ವೇಳೆ ಜಾನ್ಸನ್ ಮಾರುಕಟ್ಟೆ ಬಳಿಯ ಸೈನಿಕ ಶಾಲೆ ಎದುರು ಸಬ್ ಇನ್ಸ್ ಪೆಕ್ಟರ್ ಕೃಷ್ಣಮೂರ್ತಿ ವಾಹನಗಳನ್ನು ತಡೆದಿದ್ದನ್ನು ಪ್ರಶ್ನಿಸಿ, ಆರೋಪಿಗಳು ವಾಗ್ವಾದ ನಡೆಸಿದ್ದಾರೆ.
ಈ ವೇಳೆ ಸಬ್ ಇನ್ಸ್ ಪೆಕ್ಟರ್ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ಕೃಷ್ಣಮೂರ್ತಿ ದೂರು ದಾಖಲಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.