ಮೈಸೂರು-ಹುಣಸೂರು ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು
ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ...
ಬೆಂಗಳೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಮೈಸೂರು -ಹುಣಸೂರು ರಸ್ತೆಯ ಹಿನಕಲ್ ನ ರೂಸ್ಟ್ ಹೋಟೆಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಸಂದೀಪ್(21) ಮತ್ತು ಸಿದ್ದಾರ್ಥ(20) ಎಂದು ಗುರುತಿಸಲಾಗಿದೆ. ಇನ್ನು ಕಾರಿನಲ್ಲಿದ್ದ ಮತ್ತೋರ್ವ ಯುವಕ ಹರ್ಷ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶ್ವವಿದ್ಯಾಲಯದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.