ವಿಮ್ಸ್ ಆಸ್ಪತ್ರೆ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ದೇಹದಾನಕ್ಕೆ ನಿರ್ಧರಿಸಿದ ಒಂದೇ ಕುಟುಂಬದ 24 ಸದಸ್ಯರು

ಬಳ್ಳಾರಿಯ ಹಗರಿ ಬೊಮ್ಮನಹಳ್ಳಿಯಲ್ಲಿ ಒಂದೇ ಕುಟುಂಬದ 24 ಜನರು ಮರಣಾನಂತರ ದೇಹದಾನ ಮಾಡಲು ನಿರ್ಧರಿಸಿದ್ದಾರೆ.

ಬಳ್ಳಾರಿ: ಬಳ್ಳಾರಿಯ ಹಗರಿ ಬೊಮ್ಮನಹಳ್ಳಿಯಲ್ಲಿ ಒಂದೇ ಕುಟುಂಬದ 24 ಜನರು ಮರಣಾನಂತರ ದೇಹದಾನ ಮಾಡಲು ನಿರ್ಧರಿಸಿದ್ದಾರೆ.
ಇಲ್ಲಿನ ವಿಮ್ಸ್ ಆಸ್ಪತ್ರೆಗೆ ದೇಹದಾನ ಮಾಡಲು ಕುಟುಂಬದ ಸದಸ್ಯರು ನಿರ್ಧರಿಸಿದ್ದು, ಮರಣಾನಂತರ ದೇಹ ಮಣ್ಣಾಗುವುದು ಅಥವಾ ಬೂದಿಯಾಗುವುದರ ಬದಲು ವೈದ್ಯಕೀಯ ಕ್ಷೇತ್ರಕ್ಕೆ ಸಹಾಯವಾಗಲಿ ಎಂಬ ಸದುದ್ದೇಶದಿಂದ ನಿರ್ಧಾರ ಕೈಗೊಂಡಿದ್ದಾರೆ.
ಕುಟುಂಬದ ಮುಖ್ಯಸ್ಥರಾಗಿದ್ದ ನಿವೃತ್ತ ಶಿಕ್ಷಕ ಕೃಷ್ಣಮೂರ್ತಿ ರಾವ್ ದೇಹದಾನ ನಿರ್ಧಾರ ಕೈಗೊಂಡಿದ್ದರು. ಅವರ ನಿಧನಾನಂತರ ದೇಹವನ್ನು ವಿಮ್ಸ್ ಗೆ ದಾನ ಮಾಡಲಾಯಿತು. ಕೃಷ್ಣಮೂರ್ತಿ  ರಾವ್ ಅವರ ನಿರ್ಧಾರವೇ ಕುಟುಂಬದ ಉಳಿದ ಸದಸ್ಯರಿಗೂ ಪ್ರೇರಣೆಯಾಗಿದ್ದು, ಪತ್ನಿ, ಮಕ್ಕಳು, ಅಳಿಯಂದಿರು ಹಾಗೂ ಸಹೋದರನ ಕುಟುಂಬದವರು ಸೇರಿ ಒಟ್ಟು 24 ಸದಸ್ಯರು ತಾವೂ ದೇಹದಾನ ಮಾಡಲು ನಿರ್ಧರಿಸಿ ರಾಜ್ಯದಲ್ಲಿ ಅಪರೂಪದ ದಾಖಲೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT