ದೇವೇಗೌಡರ ವಿರುದ್ಧ ಟೌನ್ ಹಾಲ್ ನಲ್ಲಿ ಪ್ರತಿಭಟನೆ ನಡೆಸಿದ ಮೌಲ್ವಿಗಳು
ಬೆಂಗಳೂರು: ಪಕ್ಷದ ಶಾಸಕ ಜಮೀರ್ ಅಹಮ್ಮದ್ ಮೀರ್ ಸಾದಿಕ್ ವರ್ಗಕ್ಕೆ ಸೇರಿದವರಾಗಿದ್ದಾರೆಂದು ಹೇಳಿಕೆ ನೀಡಿದ ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಮಂಗಳವಾರ ಬೆಂಗಳೂರಿನ ಪುರಭವನದ ಬಳಿ ಮೌಲ್ವಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಜಮೀರ್ ಅಹಮ್ಮದ್ ಮೀರ್ ಸಾದಿಕ್ ವರ್ಗಕ್ಕೆ ಸೇರಿದವರಾಗಿದ್ದು, ಅಕ್ರಮವಾಗಿ ಹಣ ಸಂಪಾದಿಸಿ ಜನರನ್ನು ಮೆಕ್ಕಾಗೆ ಕಳುಹಿಸಿದರೆ ದೇವರು ಅವರನ್ನು ಕ್ಷಮಿಸುವುದಿಲ್ಲ ಎಂದು ದೇವೇಗೌಡರು ಕಿಡಿಕಾರಿದ್ದರು. ಈ ಹಿನ್ನಲೆಯಲ್ಲಿ ದೇವೇಗೌಡರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಮೌಲ್ವಿಗಳು, ಗೌಡರು ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಜಾಮೀಯಾ ಮಸೀದಿಯ ಮೌಲ್ವಿ ಮೌಲಾನಾ ಮಕ್ಸೂದ್ ಇಮ್ರಾನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಹೆಚ್ ಡಿ ದೇವೇಗೌಡರು ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸಬೇಕು ಎಂದು ಘೋಷಣೆ ಕೂಗುತ್ತಾ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಹೆಬ್ಟಾಳ ಉಪಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಆರ್.ಟಿ.ನಗರದಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು ಜಮೀರ್ ಅಹಮ್ಮದ್ ವಿರುದ್ಧ ವಾಗ್ಧಾಳಿ ನಡೆಸಿದ್ದರು.