ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಬೆಂಗಳೂರಿನಲ್ಲಿ ಮತ್ತೊಂದು ಗ್ಯಾಂಗ್‌ ರೇಪ್‌: ಹಾಡಹಗಲೇ ಬ್ಯೂಟಿಶಿಯನ್ ಮೇಲೆ ಸಾಮೂಹಿಕ ಅತ್ಯಾಚಾರ

ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಕೋರಮಂಗಲ ಪೊಲೀಸರು...

ಬೆಂಗಳೂರು: ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ  ಕೋರಮಂಗಲ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೋಲ್ಕೊತಾ ಮೂಲದ 22 ವರ್ಷದ ಯುವತಿಯನ್ನು ಕೋರಮಂಗಲದ ಕರ್ನಾಟಕ ಬ್ಯಾಂಕ್ ಬಳಿ ಫೆಬ್ರವರಿ 2 ರಂದು ಅಪಹರಣ ಮಾಡಲಾಗಿತ್ತು. ಸ್ನೇಹಿತೆಯನ್ನು ಭೇಟಿಯಾಗಲು ಅಶೋಕ ನಗರದಿಂದ ಕೋರಮಂಗಲಕ್ಕೆ ತೆರಳುತ್ತಿದ್ದಾಗ ಕಾರಿನಲ್ಲಿ
ಯುವತಿಯನ್ನು ಎಳೆದೊಯ್ದ  ನಾಲ್ವರು ಆರೋಪಿಗಳು ಗೋಡೌನ್ ಒಂದರಲ್ಲಿ ಅತ್ಯಾಚಾರ ನಡೆಸಿದ್ದಾರೆ. ನಂತರ ಹೊಸೂರು ಬಳಿಯ ಆಡುಗೋಡಿ ಬಳಿ ಯುವತಿಯನ್ನು ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.

ಯುವತಿ ಬಳಿಯಿದ್ದ 15 ಸಾವಿರ ರೂ. ಹಣ ಹಾಗೂ ಮೊಬೈಲ್ ದೋಚಿದ ಆರೋಪಿಗಳು ಆಕೆಗೆ ಚಾಕು ತೋರಿಸಿ ಕೂಗಾಡದಂತೆ ಬೆದರಿಸಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ. ಸಂತ್ರಸ್ತೆ ನೀಡಿದ ಮಾಹಿತಿ ಮೇರೆಗೆ ಮೂವರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ, ಇನ್ನೂ ಈ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?