ಹನುಮಂತಪ್ಪ ಕೊಪ್ಪದ 
ಜಿಲ್ಲಾ ಸುದ್ದಿ

ವೀರ ಯೋಧ ಹನುಮಂತಪ್ಪ ಕೊಪ್ಪದ ಕುಟುಂಬಕ್ಕೆ 25 ಲಕ್ಷ ರು. ಪರಿಹಾರ

ಹುತಾತ್ಮ ಯೋಧ ಸಿಯಾಚಿನ್ ಹೀರೋ ಹನುಮಂತಪ್ಪ ಕೊಪ್ಪದ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಡರಾತ್ರಿ 25 ಲಕ್ಷ ರೂಪಾಯಿ ಪರಿಹಾರದ ಚೆಕ್‌‌

ಹುಬ್ಬಳ್ಳಿ: ಹುತಾತ್ಮ ಯೋಧ ಸಿಯಾಚಿನ್ ಹೀರೋ ಹನುಮಂತಪ್ಪ ಕೊಪ್ಪದ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಡರಾತ್ರಿ 25 ಲಕ್ಷ ರೂಪಾಯಿ ಪರಿಹಾರದ ಚೆಕ್‌‌ ನೀಡಿದ್ದಾರೆ.

ದೆಹಲಿಯ ಆರ್ಮಿ ಆರ್‌ಆರ್‌‌ ಆಸ್ಪತ್ರೆಯಲ್ಲಿ ಹನುಮಂತಪ್ಪ ಕೊಪ್ಪದ ನಿಧನರಾದ ಬಳಿಕ ಅವರ ಪಾರ್ಥಿವ ಶರೀರವನ್ನು ಹುಬ್ಬಳ್ಳಿಗೆ ರವಾನಿಸಲಾಗಿದೆ. ಹುಬ್ಬಳ್ಳಿ ಏರ್‌ಪೋರ್ಟ್‌ನಲ್ಲಿ ಕೊಪ್ಪದ ಅವರಿಗೆ ಅಂತಿಮ ನಮನ ಸಲ್ಲಿಸಿದ್ದ ಸಿಎಂ ಬಳಿಕ ಮತ್ತೊಮ್ಮೆ ಕಿಮ್ಸ್‌‌ ಆಸ್ಪತ್ರೆಯಲ್ಲಿ ಅಂತಿಮ ದರ್ಶನ ಪಡೆದರು. ಬಳಿಕ ಕೊಪ್ಪದ ಅವರ ಕುಟುಂಬ ಸದಸ್ಯರಿಗೆ 25 ಲಕ್ಷ ರೂಪಾಯಿಯ ಚೆಕ್ ವಿತರಿಸಿದರು.

ಚೆಕ್‌ ವಿತರಿಸಿ ಮಾತನಾಡಿದ ಅವರು, ಕೊಪ್ಪದ ಅವರ ಹೆಸರನ್ನು ನಗರದ ಪ್ರಮುಖ ರಸ್ತೆಗೆ ಇಡಲಾಗುವುದು. ಇನ್ನಿಬ್ಬರು ಹುತಾತ್ಮ ಯೋಧರ ಕುಟುಂಬಕ್ಕೂ 25 ಲಕ್ಷ ರೂಪಾಯಿ ಮೊತ್ತದ ಚೆಕ್, 4 ಎಕರೆ ಜಮೀನು, 1 ನಿವೇಶನ, ಯೋಧರ ಪತ್ನಿಯರಿಗೆ ಸರ್ಕಾರಿ ನೌಕರಿ ನೀಡಲಾಗುವುದು ಎಂದು ಭರವಸೆ ನೀಡಿದರು.

ಹನುಮಂತಪ್ಪ ಕೊಪ್ಪದ್‌ ಅವರ ಪಾರ್ಥಿವ ಶರೀರವನ್ನು ಬೆಳಗ್ಗೆ 7 ರಿಂದ 10 ಗಂಟೆಯವರೆಗೂ ನಗರದ ನೆಹರೂ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT