ಹುಬ್ಬಳ್ಳಿ: ವೀರಯೋಧ ಹನುಮಂತಪ್ಪ ಕೊಪ್ಪದ್ ಹುತಾತ್ಮ ಹಿನ್ನಲೆಯಲ್ಲಿ ನಾಳೆ ಬೆಟದೂರಿನಲ್ಲಿ ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿದೆ.
ಧಾರವಾಡ ಜಿಲ್ಲೆಯ ಕುಂದಗೋಳು ತಾಲ್ಲೂಕಿನ ಬೆಟದೂರಿನಲ್ಲಿ ನಾಳೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಯಬೇಕಿತ್ತು. ಆದರೆ, ಸಿಯಾಚಿನ್ ಹಿಮಪಾತದಲ್ಲಿ ಮೃತಪಟ್ಟ ಯೋಧ ಹನುಮಂತಪ್ಪ ಕೊಪ್ಪದ್ ಅವರ ಅಂತ್ಯಕ್ರಿಯೆ ಅವರ ತವರಿನಲ್ಲಿ ಇಂದು ನೆರವೇರಿದ ಕಾರಣ ಮತದಾನವನ್ನು ಮುಂದೂಡಲಾಗಿದೆ.
ಎಲಿವಾಳ ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಸೇರಿದ ಬೆಟದೂರಿನಲ್ಲಿ ನಡೆಯಬೇಕಿದ್ದ ಚುನಾವಣೆ ಮುಂದೂಡಲಾಗಿದ್ದು, ಫೆಬ್ರವರಿ 15ರಂದು ಮತದಾನ ನಡೆಸಲಾಗುವುದು ಎಂದು ಧಾರವಾಡ ಜಿಲ್ಲಾಧಿಕಾರಿ ರಾಜೇಂದ್ರ ಚೋಳನ್ ಆದೇಶ ಹೊರಡಿಸಿದ್ದಾರೆ.