ಬೆಂಗಳೂರು: ನಗರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಪತಿಯನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ಗ್ರಾಮ ಪಂಚಾಯಿತಿ ಸದಸ್ಯೆ ಪತಿ, ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಪುರುಷೋತ್ತಮ್(45) ಹತ್ಯೆಗೀಡಾದವರು.
ವಡೇರಹಳ್ಳಿ ಬಳಿಯಿರುವ ಶಾಮರಾಜಪುರದಲ್ಲಿ ದುಷ್ಕರ್ಮಿಗಳು ಪುರುಷೋತ್ತಮ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆಗೈದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.