ಬೆಂಗಳೂರು: ನಗರದ ಮಾಳಗಾಳ ಫ್ಲೈಓವರ್ ಮೇಲೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಹಿಂದಿನಿಂದ ವೇಗವಾಗಿ ಬಂದ ಇಂಡಿಕಾ ಕಾರು ಟೆಂಪೊ ಟ್ರಾವೆಲರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ, ಡಿಕ್ಕಿ ರಭಸಕ್ಕೆ ಟಿಟಿ ವಾಹನ ಫ್ಲೈಓವರ್ ಡಿವೇಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೈಕ್ ಮೇಲೆ ಉರುಳಿ ಬಿದ್ದಿದೆ.
ಬೈಕ್ ಮೇಲೆ ಟಿಟಿ ವಾಹನ ಉರುಳಿ ಬಿದ್ದ ಪರಿಣಾಮ, ವಾಹನದ ಕೆಳಗೆ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಗರಬಾವಿಯಿಂದ ಸುಮನಹಳ್ಳಿ ಕಡೆಗೆ ಟೆಂಪೋ ಟ್ರಾವೆಲರ್ ಹೋಗುತ್ತಿತ್ತು. ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.