ಬೆಂಗಳೂರು: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯ ಕುಡೂರಿನ ಅಂಚೆಪಾಳ್ಯದಲ್ಲಿ ಭಾನುವಾರ ರಾತ್ರಿ ಸುಮಾರು 7.45 ರ ಸಮಯದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಕುದುರೆಗೆರೆಯ ನಿವಾಸಿಗಳಾದ ಸರೋಜಮ್ಮ(70), ಅವರ ಪುತ್ರ ರೇಣುಕಪ್ಪಾ(50) ಮತ್ತು ಗಂಗಮ್ಮ(40) ಮೃತಪಟ್ಟಿದ್ದಾರೆ.
ಟಾಟಾ ಸುಮೋದಲ್ಲಿ 9 ಮಂದಿಯೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗಿ ಪೂಜೆ ಮುಗಿಸಿಕೊಂಡು ವಾಪಸಾಗುತ್ತಿದ್ದರು. ಈ ವೇಳೆ ಊಟ ಮಾಡಲು ರಸ್ತೆ ಬದಿ ಸುಮೋ ನಿಲ್ಲಿಸಿ ಎದುರಿಗೆ ಇದ್ದ ಡಾಬಾಗೆ ತೆರಳುಲು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆದರೆ, ಅಪಘಾತ ಮಾಡಿದ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದಾನೆ. ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸರಬಹುದು ಎಂದು ಪೊಲೀಸರು ಶಂಕಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.