ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿಯಲ್ಲಿ ಶನಿವಾರ ನಡೆಸಲಿರುವ ಬೃಹತ್ ರೈತ ರ್ಯಾಲಿ ವಿರೋಧಿಸಿ ರೈತ ಸಂಘಟನೆಗಳೇ ಪ್ರತಿಭಟನೆ ನಡೆಸುತ್ತಿವೆ. ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ರಾಜ್ಯ ರೈತ ಸಂಘ, ಕಳಸಾ-ಬಂಡೂರಿ ಹೋರಾಟ ಸಮಿತಿ ಮತ್ತು ಭಾರತೀಯ ಕೃಷಿಕ ಸಮಾಜ ಸಂಘಟನೆ ಪ್ರತಿಭಟನೆ ನಡೆಸುತ್ತಿವೆ. ಬೆಳಗಾವಿ ನಗರದ ಹೊರವಲಯದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೋದಿಯವರು ಆಗಮಿಸುವ ಹೊತ್ತಿಗೆ ಕಪ್ಪು ಬಾವುಟ ಪ್ರದರ್ಶಿಸಲು ಸಜ್ಜಾಗಿದ್ದಾರೆ.
ಕಳಸಾ-ಬಂಡೂರಿ ಯೋಜನೆ ಕುರಿತು ಮಹಾರಾಷ್ಟ್ರ, ಗೋವಾ ಹಾಗೂ ಕರ್ನಾಟಕ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸುವಲ್ಲಿ ಪ್ರಧಾನಿ ಮೋದಿಯವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಕೇಂದ್ರ ಸರ್ಕಾರ ಕೃಷಿ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಿದೆ.