ಬೆಂಗಳೂರು: ನೂತನ ಲೋಕಾಯುಕ್ತರ ನೇಮಕ ಸಂಬಂಧ ಜ.4ರಂದು ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳು, ಸ್ಪೀಕರ್, ಸಭಾಪತಿ, ಉಭಯ ಸದನಗಳ ವಿಪಕ್ಷ ನಾಯಕರನ್ನು ಒಳಗೊಂಡ ಆಯ್ಕೆ ಸಮಿತಿ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶುಕ್ರವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಿ. ಆರ್.ವಾಲಾ ಅವರಿಗೆ ಹೊಸವರ್ಷದ ಶುಭಾಶಯ ಕೋರಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ನೂತನ ಲೋಕಾಯುಕ್ತ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬುದರ ಬಗ್ಗೆ ಚರ್ಚಿಸಿ ಆಯ್ಕೆಯಾದ ನ್ಯಾಯಮೂರ್ತಿಗಳ ಹೆಸರನ್ನು ರಾಜ್ಯ ಪಾಲರಿಗೆ ಶಿಫಾರಸ್ಸು ಮಾಡಲಾಗುವುದು. ರಾಜ್ಯ ಪಾಲರು ಸಮ್ಮತಿಸಿದ ಬಳಿಕ ನೂತನ ಲೋಕಾ ಯುಕ್ತರ ನೇಮಕಕ್ಕೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.