ಖೈದಿಗಳೊಂದಿಗೆ ಮಾತುಕತೆ ನಡೆಸುತ್ತಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ 
ಜಿಲ್ಲಾ ಸುದ್ದಿ

ಗಣತಂತ್ರಕ್ಕೆ ಸನ್ನಡತೆ ಕೈದಿಗಳ ಬಿಡುಗಡೆ: ಡಾ.ಜಿ.ಪರಮೇಶ್ವರ

ನಾನಾ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ಸೆರೆವಾಸ ಅನುಭವಿಸುಪತ್ತಿರುವ ಕೈದಿಗಳಲ್ಲಿ ಸನ್ನಡತೆಯ ಕೈದಿಗಳನ್ನು ಗಣರಾಜ್ಯೋತ್ಸವದ ದಿನ ಬಿಡುಗಡೆಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ...

ಬೆಂಗಳೂರು: ನಾನಾ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ಸೆರೆವಾಸ ಅನುಭವಿಸುಪತ್ತಿರುವ ಕೈದಿಗಳಲ್ಲಿ ಸನ್ನಡತೆಯ ಕೈದಿಗಳನ್ನು ಗಣರಾಜ್ಯೋತ್ಸವದ ದಿನ ಬಿಡುಗಡೆಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

ಹೊಸ ವರ್ಷಾಚರಣೆ ಅಂಗವಾಗಿ ಶುಕ್ರವಾರ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಭೇಟಿ ನೀಡಿದ್ದ ಗೃಹಸಚಿವರು, ಕೈದಿಗಳೊಂದಿಗೆ ಬೆರೆತು ಹೊಸ ವರ್ಷ ಆಚರಿಸಿದರು. ಬಳಿಕ ಸುದ್ದಿಗಾಹರರೊಂದಿಗೆ ಮಾತನಾಡಿದ ಅವರು, ಹಲವು ವರ್ಷಗಳಿಂದ ಜೈಲಿನಲ್ಲಿದ್ದು ಸನ್ನಡದೆ ತೋರಿರುವ ಕೈದಿಗಳ ಪಟ್ಟಿ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕೈದಿಗಳ ಬಿಡುಗಡೆ ಸಂಬಂಧ ಮುಖ್ಯಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಶೀಘ್ರದಲ್ಲೇ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದೆಂದು ಅವರು ಹೇಳಿದರು.

ಕೇಂದ್ರ ಕಾರಾಗೃಹದಲ್ಲಿ ವಿಐಪಿ ಕೈದಿಗಳನ್ನು ವಿಶೇಷವಾಗಿ ನೋಡಿಕೊಳ್ಳುತ್ತಾರೆ ಎಂಬ ಭಾವನೆ ದೂರವಾಗಿದೆ. ಏಕೆಂದರೆ, ಅಲ್ಲಿ ಅಂತಹ ವಾತಾವರಣೆ ಇಲ್ಲ. ಎಲ್ಲ ಕೈದಿಗಳನ್ನೂ ಒಂದೇ ರೀತಿ ಕಾಣಲಾಗುತ್ತಿದೆ. ಯಾವುದೋ ಸಂದರ್ಭಕ್ಕೆ ಸಿಲುಕಿ ಅಪರಾಧ ಮಾಡಿ ಶಿಕ್ಷೆ ಅನುಭವಿಸುತ್ತಿರುವ ಹಲವು ಕೈದಿಗಳು ಓದು ಮುಂದುವರಿಸುವ ಆಶಯ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಅವರಿಗೆ ಮುಕ್ತ ವಿವಿಯಲ್ಲಿ ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಇವರಿಗೆ ಸೂಕ್ತ ಮಾರ್ಗದರ್ಶನ ನೀಡುವಂಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವರು ತಿಳಿಸಿದರು.

ಸಣ್ಣಪುಟ್ಟ ಸಮಸ್ಯೆಗಳಿವೆ
ಕೈದಿಗಳಿಗೆ ಸಿಹಿ ವಿತರಿಸುವ ಮೂಲಕ ಹೊಸ ವರ್ಷವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿದ್ದೇನೆ. ಕಾರಾಗೃಹವನ್ನು ಪರಿಶೀಲನೆ ನಡೆಸಿದ್ದು, ಸಣ್ಣಪುಟ್ಟ ಸಮಸ್ಯೆಗಳು ಕಂಡು ಬಂದಿವೆ. ಇನ್ನು ಅಡುಗೆ ಕೊಠಡಿ, ಗ್ರಂಥಾಲಯ, ಬ್ಯಾಂಕ್ ಗಳು, ಆಸ್ಪತ್ರೆ, ಶೌಚಾಲಯ ಸಮರ್ಪಕವಾಗಿದೆ. ಆದರೂ ಎದುರಾಗಿರುವ ಸಮಸ್ಯೆಗಳನ್ನು ಕೂಡಲೇ ನಿವಾರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಪುರುಷ ಮತ್ತು ಮಹಿಳಾ ಕೈದಿಗಳು ನನ್ನೊಂದಿಗೆ ಮುಕ್ತವಾಗಿ ಮಾತನಾಡಿದರು. ಅವರ ಮಾತಿನಲ್ಲಿ ತಪ್ಪಿನ ಅರಿವಾಗಿರುವುದು ಗೋಚರವಾಯಿತು. ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಿದರೆ ಸಮಾಜದಲ್ಲಿ ಉತ್ತಮವಾಹಿ ಜೀವನ ನಡೆಸುತ್ತಾರೆ ಎಂಬ ನಂಬಿಕೆಯಿದೆ. ಹೀಗಾಗಿ ಗಣರಾಜ್ಯೋತ್ಸವ ದಿನ ಸನ್ನಡತೆ ಕೈದಿಗಳ ಬಿಡುಗಡೆ ಸಂಬಂಧ ಚರ್ಚಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಈ ವೇಳೆ ಕಾರಾಗೃಹಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್ ಪಂತ್, ಕಾರಾಗೃಹ ಅಧೀಕ್ಷಕ ಕೃಷ್ಣಕುಮಾರ್ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್​ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!

CJP ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್​ಗೆ ಬಿಗ್ ಶಾಕ್; ಗಡಿಪಾರು ಸಾಧ್ಯತೆ

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಹಾರ್ಮೊಜ್ ಮೇಲೆ ಈಗಲೂ ನಮ್ಮದೇ ನಿಯಂತ್ರಣ: ವಾಸ್ತವಕ್ಕೂ ಅಮೆರಿಕ ಹೇಳಿಕೆಗಳಿಗೂ ತಾಳೆಯಾಗುವುದಿಲ್ಲ- ಇರಾನ್