ಬೆಂಗಳೂರು: ಪೋಷಕರು ಮನೆಯಲ್ಲಿ ಇಲ್ಲದ ವೇಳೆ 15 ವರ್ಷದ ಬಾಲಕನೊಬ್ಬ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಶುಕ್ರವಾರ ಸಂಜೆ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೆಲಸ ನಿಮಿತ್ತ ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಹೊರಗೆ ಹೋಗಿದ್ದ ಪೊೀಷಕರು ವಾಪಸ್ ಮನೆಗೆ ಬಂದಾಗ ಬಾಲಕಿ ಅಸ್ವಸ್ಥಳಾಗಿದ್ದಳು. ನಂತರ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಬಾಲಕ 9ನೇ ತರಗತಿ ಓದುತ್ತಿದ್ದು, ಬಾಲಕಿ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಶುಕ್ರವಾರ ಸಂಜೆ ಶಾಲೆಯಿಂದ
ಮನೆಗೆ ಬಂದು ಆಟವಾಡುತ್ತಿದ್ದಳು.
ಈ ವೇಳೆ ಘಟನೆ ನಡೆದಿದ್ದು, ಇಬ್ಬರ ಪೊೀಷಕರು ಮನೆಯಲ್ಲಿ ಇರಲಿಲ್ಲ . ಬಾಲಾಪರಾಧಿ ಕಾಯ್ದೆಯಡಿ ಬಾಲಕನನ್ನು ವಶಕ್ಕೆ ತೆಗೆದುಕೊಂಡು ಬಾಲಮಂದಿರಕ್ಕೆ ಕಳುಹಿಸಲಾಗಿದೆ.
ದೌರ್ಜನ್ಯಕ್ಕೊಳಗಾದ ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ. ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪೀಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.