ಕೆ.ಆರ್.ಪುರಂ: ಮಹಿಳೆಯರು ತಮ್ಮ ಬಳಿಯಿರುವ ಬಂಗಾರ ಸೇರಿದಂತೆ ವಿವಿಧ ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಆವಲಹಳ್ಳಿ ಸಬ್‍ಇನ್ಸ್‍ಪೆಕ್ಟರ್ ಶ್ರೀನಿವಾಸ್ಹೇ ಳಿದರು.
ಮಹದೇವಪುರದ ಬೊಮ್ಮನ ಹಳ್ಳಿಯ ಆವಲಹಳ್ಳಿ ಪೊಲೀಸ್ ಠಾಣೆಯಿಂದ ಆಯೋಜಿಸಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರದಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದ್ದು, ನಿರ್ಜನ ಪ್ರದೇಶದಲ್ಲಿ ಒಂಟಿಯಾಗಿ ಮಹಿಳೆಯರು ಸಂಚರಿಸಬಾರದು. ಬೆಳಗಿನ ಜಾವದಲ್ಲಿ ಹಾಗೂ ಸಂಜೆ ವೇಳೆ ವಾಯು ವಿಹಾರಕ್ಕೆ ತೆರಳುವ
ಸಂದರ್ಭದಲ್ಲಿ, ಶುಭ ಸಮಾರಂಭಗಳಿಗೆ ತೆರಳುವಾಗ ಬೆಲೆ ಬಾಳುವ ಚಿನ್ನಾಭರಣಗಳನ್ನು ಕಾಣದಂತೆ ಹಾಕಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಪ್ರಯಾಣಕ್ಕೆ ಹೊರಟಾಗ ಠಾಣೆಗೆ ಮಾಹಿತಿ ನೀಡಬೇಕು. ಅಪರಿಚಿತರು ಹಾಗೂ ಅನುಮಾನಾಸ್ಪದ ವ್ಯಕ್ತಿಗಳು, ಅನುಮಾನಮಾಸ್ಪದ ವಸ್ತುಗಳು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡಬೇಕು. ಅನೈತಿಕ ಹಾಗೂ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದು ಗಮನಕ್ಕೆ ಬಂದಲ್ಲಿ ಪೊಲೀಸರಿಗೆ ತಿಳಿಸಬೇಕು.
ಮಾಹಿತಿದಾರರ ಹೆಸರನ್ನು ಗೌಪ್ಯವಾಗಿಡುತ್ತೇವೆ ಎಂದ ಅವರು, ಯಾವುದೇ ಕಾರಣಕ್ಕೂ ದೌರ್ಜನ್ಯ ದಬ್ಬಾಳಿಕೆಗಳಿಗೆ ಅವಕಾಶ ಕೊಡುವುದಿಲ್ಲ. ಪೊಲೀಸರು ಸದಾ ನಿಮ್ಮ ರಕ್ಷಣೆಗೆ ಬರುತ್ತಾರೆ. ಪೊಲೀಸ್ ಠಾಣೆಗೆ ಬರಲು ಯಾರೂ ಹೆದರಬೇಕಿಲ್ಲ. ಪ್ರತಿಯೊಬ್ಬರೂ ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ತಿಳಿಸಬಹುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics