ಧಾರವಾಡ: ಸಂಶೋಧಕ ಡಾ. ಕಲಬುರ್ಗಿ ಅವರ ಹತ್ಯೆ ಕುರಿತು ಹಲವು ಸುಳಿವುಗಳು ದೊರೆತಿದ್ದು, ಶೀಘ್ರದಲ್ಲಿಯೇ ಹಂತಕರನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.
ಇಲ್ಲಿಯ ಕಲ್ಯಾಣ ನಗರದ ಡಾ. ಎಂ.ಎಂ. ಕಲಬುರ್ಗಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಕಲಬುರ್ಗಿ ಪತ್ನಿ ಉಮಾದೇವಿ ಅವರಿಗೆ ಸಾಂತ್ವನ ಹೇಳಿದರು. ಆನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಲಬುರ್ಗಿ ಹಂತಕರನ್ನು ಹಿಡಿಯುವುದು ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ರಾಜ್ಯದಲ್ಲಿ ಈ ರೀತಿಯ ಘಟನೆ ನಡೆಯಬಾರದಿತ್ತು.
ಆದರೂ ನಡೆದಿದೆ. ಆದರೆ, ಹಂತಕರನ್ನು ಪತ್ತೆಹಚ್ಚುವಲ್ಲಿ ಇಲಾಖೆ ಹಿಂದೆ ಬಿದ್ದಿಲ್ಲ. ಇಲಾಖೆ ಇಂದಿಗೂ ತೀವ್ರ ಗತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಹಲವಾರು ಸುಳಿವುಗಳು ದೊರೆತಿದ್ದು, ಕೆಲವೊಂದು ಮಾಹಿತಿ ಹೊರಗೆಡವಲು ಆಗುವುದಿಲ್ಲ ಎಂದು ತಿಳಿಸಿದರು.