ಅತ್ಯಾಚಾರ ಪ್ರಕರಣ: ಕೋರ್ಟ್ ಗೆ ನಿತ್ಯಾನಂದ ಹಾಜರು
ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಪ್ರಕರಣ ಎದುರಿಸುತ್ತಿರುವ ಬಿಡದಿಯ ಧ್ಯಾನಪೀಠದ ನಿತ್ಯಾನಂದ ವಿಚಾರಣೆಗಾಗಿ...
ರಾಮನಗರ: ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಪ್ರಕರಣ ಎದುರಿಸುತ್ತಿರುವ ಬಿಡದಿಯ ಧ್ಯಾನಪೀಠದ ನಿತ್ಯಾನಂದ ವಿಚಾರಣೆಗಾಗಿ ಗುರುವಾರ ರಾಮನಗರ ಕೋರ್ಟ್ ಗೆ ಹಾಜರಾಗಿದ್ದಾರೆ.
ರಾಮನಗರ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ನಾಗಶ್ರೀ ಮುಂದೆ ನಿತ್ಯಾನಂದ ಮತ್ತು ಆತನ ಐವರು ಶಿಷ್ಯರು ಹಾಜರಾಗಿದ್ದಾರೆ.
ನಿತ್ಯಾನಂದ ಪರ ವಕೀಲರು ವಾದ ಮಂಡಿಸುತ್ತಿದ್ದಾರೆ. ಕಳೆದ ಡಿಸೆಂಬರ್ 19ರಂದು ವಿಚಾರಣೆಗೆ ಮುಂದೂಡಲಾಗಿತ್ತು. ಇಂದು ಮತ್ತೆ ಕೋರ್ಟ್ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.