ಗ್ಯಾಸ್ ರೀಫಿಲ್ಲಿಂಗ್ ಆರೋಪಿ ಸೆರೆ
ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಸಂಗ್ರಹಿಸಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ರಾಜರಾಜೇಶ್ವರಿನಗರ ಠಾಣೆ ಪೊಲೀಸರು ರು.1.32 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 91 ಗ್ಯಾಸ್ ಸಿಲಿಂಡರ್ ವಶಪಡಿಸಿಕೊಂಡಿದ್ದಾರೆ...
ಬೆಂಗಳೂರು: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಸಂಗ್ರಹಿಸಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ರಾಜರಾಜೇಶ್ವರಿನಗರ ಠಾಣೆ ಪೊಲೀಸರು ರು.1.32 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 91 ಗ್ಯಾಸ್ ಸಿಲಿಂಡರ್ ವಶಪಡಿಸಿಕೊಂಡಿದ್ದಾರೆ.
ವಾಲ್ಮೀಕಿನಗರ ನಿವಾಸಿ ಶ್ರೀನಿವಾಸ (25) ಬಂಧಿತ ಆರೋಪಿ, ಚನ್ನಸಂದ್ರ ದ್ವಾರಕನಗರದ ಮನೆಯೊಂದರಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಸಂಗ್ರಹಿಸಿದ್ದು, ಗೃಹೋಪಯೋಗಿ ಗ್ಯಾಸ್ ಸಿಲಿಂಡರ್ಗಳಿಂದ ವಾಣಿಜ್ಯ ಬಳಕೆಯ ಸಿಲಿಂಡರ್ ಗಳಿಗೆ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿರುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ಜ.6ರಂದು ಪೊಲೀಸರು ದಾಳಿ ನಡೆಸಿದ್ದರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಧನಂಜಯನ ಬಂಧನಕ್ಕೆ ಬಲೆ ಬೀಸಿದ್ದಾರೆ.