ಮುದ್ದೆ ಕೋಲಿನಿಂದ ಪತಿಯ ಕೊಂದ ಪತ್ನಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಮುದ್ದೆ ಕೋಲಿನಿಂದ ಪತಿಯ ಕೊಂದ ಪತ್ನಿ

ದಿನನಿತ್ಯ ಕುಡಿದು ಮನೆಗೆ ಬಂದು ಪತ್ನಿಯ ಶೀಲ ಶಂಕಿಸಿ ಕಿರುಕುಳ ನೀಡುತ್ತಿದ್ದ ಗಂಡನನ್ನು ತನ್ನ ಸಹೋದರನ ಜೊತೆ ಸೇರಿ ಪತ್ನಿಯೇ ಹತ್ಯೆಗೈದಿರುವ ಘಟನೆ ಕೆ.ಆರ್.ಪುರದ ಭಟ್ಟರಹಳ್ಳಿಯಲ್ಲಿ ಗುರುವಾರ ನಡೆದಿದೆ...

ಬೆಂಗಳೂರು: ದಿನನಿತ್ಯ ಕುಡಿದು ಮನೆಗೆ ಬಂದು ಪತ್ನಿಯ ಶೀಲ ಶಂಕಿಸಿ ಕಿರುಕುಳ ನೀಡುತ್ತಿದ್ದ ಗಂಡನನ್ನು ತನ್ನ ಸಹೋದರನ ಜೊತೆ ಸೇರಿ ಪತ್ನಿಯೇ ಹತ್ಯೆಗೈದಿರುವ ಘಟನೆ ಕೆ.ಆರ್.ಪುರದ  ಭಟ್ಟರಹಳ್ಳಿಯಲ್ಲಿ ಗುರುವಾರ ನಡೆದಿದೆ.

ಹೆಚ್‍ಎಎಲ್ ಬಳಿಯ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಾರುತಿ (39) ಕೊಲೆಯಾದ ವ್ಯಕ್ತಿ. ಕೆ.ಆರ್.ಪುರದ ಭಟ್ಟರಹಳ್ಳಿ ವಾಸಿಯಾಗಿದ್ದ ಮಾರುತಿ ಕಳೆದ 15 ವರ್ಷಗಳ ಹಿಂದೆ ದಾಸರಹಳ್ಳಿಯ ಶಾರದ ಎಂಬುವರನ್ನು ವಿವಾಹವಾಗಿದ್ದರು. ಇವರಿಗೆ ವಿಕಲಚೇತನ ಪುತ್ರ ಆದಿತ್ಯ ಹಾಗೂ ಪುನೀತ್ ಎಂಬ ಗಂಡು ಮಕ್ಕಳಿದ್ದಾರೆ. ಕೆಲಸಕ್ಕೆ ಹೋಗುತ್ತಿದ್ದ ಮಾರುತಿ ಕುಡಿದ ಅಮಲಿನಲ್ಲಿ ಮನೆಗೆ ಬರುತ್ತಿದ್ದ. ವಿನಾಃಕಾರಣ ಪತ್ನಿಯ ಮೇಲೆ ಜಗಳ ಮಾಡುತ್ತಿದ್ದ.

ಈ ಸಂಬಂಧ ಕೆ.ಆರ್.ಪುರ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಕೌಟುಂಬಿಕ ವಿಚಾರವಾದ ಕಾರಣ ಸಂಧಾನ ಮಾಡಿಕೊಳ್ಳುವುದಾಗಿ ಶಾರದ ಪೊಷಕರು ಬುಧವಾರ ಸಂಜೆ ಠಾಣೆಯಿಂದ  ಇಬ್ಬರನ್ನು ಕರೆದೊಯ್ದಿದ್ದರು. ಠಾಣೆಯಿಂದ ಹೋದ ಮಾರುತಿ ಮನೆಗೆ ಹೋಗಿರಲಿಲ್ಲ, ಗುರುವಾರ ಬೆಳಗಿನ ಜಾವ 3ಗಂಟೆ ಸುಮಾರಿಗೆ ಕಂಠ ಪೂರ್ತಿ ಕುಡಿದು ಮನೆಗೆ ಹೋಗಿ ಮತ್ತೆ ಜಗಳ ಮಾಡಿದ್ದಾನೆ.

ಇದರಿಂದ ಕೋಪಗೊಂಡ ಪತ್ನಿ ಶಾರದ ತನ್ನ ಸಹೋದರ ಧನರಾಜ್ ನನ್ನು ಕರೆಸಿಕೊಂಡಿದ್ದಾಳೆ. ಈ ವೇಳೆ ಮಾತಿನ ಚಕಮಕಿ ನಡೆದಿದೆ. ಸಿಟ್ಟಿಗೆದ್ದ ಶಾರಧ ಮತ್ತು ಆಕೆಯ ಸಹೋಧರ ಮುದ್ದೆ  ಕೋಲಿನಿಂದ ಹಲ್ಲೆ ಮಾಡಿದ್ದಾರೆ. ಕುಸಿದು ಬಿದ್ದ ಮಾರುತಿಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕೆ.ಆರ್. ಪುರ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ

Toxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!

ಹನೂರು ಶೂಟೌಟ್ ಪ್ರಕರಣ: ನಮ್ಮ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸಬೇಡಿ, ನಿಮ್ಮ ಕೆಲಸ ನೋಡ್ಕೊಳ್ಳಿ; ತಮಿಳುನಾಡಿಗೆ ಸಿಎಂ ಡಿಕೆಶಿ ವಾರ್ನಿಂಗ್!

ಇಂಥ ಅಸಹ್ಯಕ್ಕೂ ನಿಮ್ಮ ಬಳಿ ಸಮರ್ಥನೆಯಿದೆಯೇ? ಧ್ವಜಾರೋಹಣದ ಜೊತೆ ನಿಮ್ಮ ಘನತೆ ಗಾಳಿಗೆ ಹಾರಿ ಹೋಗಲಿಲ್ಲವೇ?

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ 'ಮಂಕಿಮ್ಯಾನ್'; ಜ್ಯೋತಿರಾಜ್ ಕೈ ಹಿಡಿಯುತ್ತಿರುವ ಯುವತಿ ಯಾರು ಗೊತ್ತಾ?