ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯ ವಿಭಾಗದ ಅಧಿಕಾರಿಗಳಿಗೆ ವನ್ಯ ಜೀವಿಗಳ ಸ್ಥಳಾಂತರ ಸೇರಿದಂತೆ ಕೆಲವು ಸೂಕ್ಷ್ಮ ಕರ್ತವ್ಯಗಳ ಅಧಿಕಾರ ನೀಡಬೇಕೆಂಬ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ5(2), 5(3) ಕಾಯ್ದೆ ಅಡಿಯಲ್ಲಿ ವನ್ಯಜೀವಿ ಸಂರಕ್ಷಣೆ, ವನ್ಯಜೀವಿ ಬೇಟೆಗಾರರ ವಿರುದಟಛಿ ಚಾರ್ಜ್‍ಶೀಟ್ ಸಲ್ಲಿಕೆ, ವನ್ಯಜೀವಿಗಳನ್ನು ಸುರಕ್ಷಿತ ಆವಾಸಸ್ಥಾನಗಳಿಗೆ ಸ್ಥಳಾಂತರ ಮಾಡುವುದು, ವನ್ಯಜೀವಿಗಳ ನಿರ್ವಹಣೆ ಮಾಡುವುದು ಸೇರಿದಂತೆ ಹಲವು ಅಧಿಕಾರಗಳನ್ನು ಮುಖ್ಯ ವನ್ಯಜೀವಿ ಪರಿಪಾಲಕರು ಹಾಗೂ ಮುಖ್ಯ
ವನ್ಯಜೀವಿ ಪರಿಪಾಲಕರ ಆಧೀನದ ಅಧಿಕಾರಿಗಳಿಗೆ ನೀಡಲಾಗಿದೆ. ಈ ಅಧಿಕಾರವನ್ನು ಪಾಲಿಕೆ ಅರಣ್ಯ ವಿಭಾಗದ ಅಧಿಕಾರಿಗಳಿಗೂ ನೀಡಬೇಕೆಂದು ಬಿಬಿಎಂಪಿ ಸಲ್ಲಿಸಿದ
ಪ್ರಸ್ತಾವನೆಯನ್ನು ಸರ್ಕಾರ ರದ್ದುಗೊಳಿಸಿದೆ.
ಬಿಬಿಎಂಪಿ ಅರಣ್ಯ ವಿಭಾಗದ ಅಧಿಕಾರಿಗಳಿಗೆ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ 5 (2), 5 (3) ಕಾಯ್ದೆ ಅಧಿಕಾರ ನೀಡುವುದು ಸಾಧ್ಯವಿಲ್ಲ. ಅಲ್ಲದೆ, ಈ ಅಧಿಕಾರ ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಅಥವಾ ಮುಖ್ಯ ವನ್ಯಜೀವಿ ಪರಿಪಾಲಕರ ಅಧೀನದಲ್ಲಿರುವ ಅಧಿಕಾರಿಗಳಿಗೆ ಮಾತ್ರ ನೀಡಲು ಸಾಧ್ಯ. ಹಾಗಾಗಿ ಬಿಬಿಎಂಪಿ ಸಲ್ಲಿಸಿದ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ.