(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಮಸಾಜ್ ನೆಪದಲ್ಲಿ ಆಭರಣ ದೋಚಿ ಪರಾರಿ

ಮಸಾಜ್ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಗಮನ ಬೇರೆಡೆ ಸೆಳೆದು ಸುರಾರು 100 ಗ್ರಾಂ ತೂಕದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಶುಕ್ರವಾರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...

ಬೆಂಗಳೂರು: ಮಸಾಜ್ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಗಮನ ಬೇರೆಡೆ ಸೆಳೆದು ಸುರಾರು 100 ಗ್ರಾಂ ತೂಕದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಶುಕ್ರವಾರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೈಕೋ ಲೇಔಟ್ ನಿವಾಸಿ ಲಕ್ಷ್ಮೀನರಸಮ್ಮ (58) ಚಿನ್ನಾಭರಣ ಕಳೆದುಕೊಂಡವರು. ಗುರುವಾರವಷ್ಟೇ ಮನೆಗೆಲಸಕ್ಕೆ ಸೇರಿಕೊಂಡಿದ್ದ ಲಕ್ಷ್ಮೀ ಎಂಬಾಕೆ ಈ ಕೃತ್ಯ ಎಸೆಗಿ ಪರಾರಿಯಾಗಿದ್ದಾಳೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಮನೆಗೆಲಸಕ್ಕೆ ಬಂದ ಈಕೆ ಮನೆಯೊಡತಿಗೆ ಮಸಾಜ್ ಮಾಡುವುದಾಗಿ ಹೇಳಿದ್ದಾಳೆ.

ಇದಕ್ಕೆ ಒಪ್ಪಿದ ನರಸಮ್ಮ ಮಸಾಜ್ ಮಾಡಿಸಿಕೊಳ್ಳುವಾಗ ಮೈಮೇಲಿದ್ದ ಒಡವೆಗಳನ್ನು ಸ್ವಲ್ಪ ಸಮಯ ಬಿಚ್ಚಿಡುವಂತೆ ಹೇಳಿದ್ದಾಳೆ. ಇದಕ್ಕೂ ಸಮ್ಮತಿಸಿ ಕೊರಳಿನಲ್ಲಿದ್ದ ಚಿನ್ನದ ಸರ ಹಾಗೂ ಕೈಯಲ್ಲಿದ್ದ ಬಳೆಗಳನ್ನು ಬಿಚ್ಚಿ ಅಲ್ಲೇ ಪಕ್ಕಕ್ಕೆ ಇಟ್ಟಿದ್ದಾರೆ. ಮಸಾಜ್ ಮಾಡಿದ ಲಕ್ಷ್ಮೀ ಮೆಲ್ಲೆಗೆ ಕಣ್ಮುಚ್ಚಿ ರಿಲ್ಯಾಕ್ಸ್ ಮಾಡುವಂತೆ ಹೇಳಿ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲಸಕ್ಕೆ ಸೇರಿ ಕೇವಲ ಒಂದೇ ದಿನದಲ್ಲಿ ಮಹಿಳೆ ಈ ಕೃತ್ಯ ಎಸೆಗಿದ್ದಾಳೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kerala: ಕಾಂಗ್ರೆಸ್ ಸಂಸದ Shashi Tharoor ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ನಕಾರ; 'ಯುದ್ಧ ನಿಲ್ಲಿಸುವ ಪ್ರಯತ್ನಗಳಿಗೆ ಹಿನ್ನಡೆಯಾಗಿಲ್ಲ': ಮಾಧ್ಯಮ ವರದಿಗಳನ್ನು ತಿರಸ್ಕರಿಸಿದ ಪಾಕಿಸ್ತಾನ!

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

ಪೆಟ್ರೋಲ್ ದರ ಏರಿಕೆ, ದೇಶಾದ್ಯಂತ ವ್ಯಾಪಕ ಪ್ರತಿಭಟನೆ; ಬೆಚ್ಚಿಬಿದ್ದ Pak ಸರ್ಕಾರ, ಲೀಟರ್ ಗೆ 80 ರೂ ಗಳಷ್ಟು ಬೆಲೆ ಕಡಿತ!

Hubli Love jihad case: ವಿಡಿಯೋ ಇರೋದು ನಿಜ, ಆದ್ರೆ… ಪ್ರಜ್ಞೆ ತಪ್ಪಿದ್ದರೆ ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ?: Sameer Mulla ಸ್ಫೋಟಕ ಹೇಳಿಕೆ!

SCROLL FOR NEXT