ಭೂಗಳ್ಳತನ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

2ಜಿ ಮಾದರಿ ತನಿಖೆ ಮಾಡಿ

ಭೂಗಳ್ಳರ ಕಡಿವಾಣಕ್ಕೆ ವಿಶೇಷ ನ್ಯಾಯಾಲಯ ಸ್ಥಾಪಿಸುವಂತೆ ಒತ್ತಾಯಿಸಿ ಜ.18ರಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಭೂ ಕಬಳಿಕೆ ವಿರೋಧಿ ಹೋರಾಟ ಸಮಿತಿ ಸಂಚಾಲಕ ಎ.ಟಿ.ರಾಮಸ್ವಾಮಿ ತಿಳಿಸಿದರು...

ಬೆಂಗಳೂರು: ಭೂಗಳ್ಳರ ಕಡಿವಾಣಕ್ಕೆ ವಿಶೇಷ ನ್ಯಾಯಾಲಯ ಸ್ಥಾಪಿಸುವಂತೆ ಒತ್ತಾಯಿಸಿ ಜ.18ರಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಭೂ ಕಬಳಿಕೆ ವಿರೋಧಿ ಹೋರಾಟ  ಸಮಿತಿ ಸಂಚಾಲಕ ಎ.ಟಿ.ರಾಮಸ್ವಾಮಿ ತಿಳಿಸಿದರು.

ಬೆಂಗಳೂರು ನಗರದ 2160 ಎಕರೆ ಭೂಮಿ ಒತ್ತುವರಿಯಾಗಿರುವ ಕುರಿತು 2007ರಲ್ಲಿ ಸುಬ್ರಹ್ಮಣ್ಯಂ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಅದರಲ್ಲಿ 312 ಎಕರೆ ಅರಣ್ಯ ಭೂಮಿ ಸೇರಿದೆ  ಎಂದು ವರದಿ ತಿಳಿಸಿದೆ. ಬಲಾಢ್ಯರು ಸರ್ಕಾರಿ ಭೂಮಿಗಳ ನುಂಗಣ್ಣರಾಗುತ್ತಿದ್ದಾರೆ. ಅಂದಿನಿಂದ ಈವರೆಗೆ ಸರ್ಕಾರ ಯಾರೊಬ್ಬರ ಮೇಲೂ ಸರ್ಕಾರ ಕ್ರಮ ಕೈಗೊಳ್ಳದ ಪರಿಣಾಮ ಇಂದು  ಒತ್ತುವರಿ ಭೂಮಿ ಪ್ರಮಾಣ 4277 ಎಕರೆಗೂ ಹೆಚ್ಚಾಗಿದೆ. ಸರ್ಕಾರ ಈಗಲೂ ಒತ್ತುವರಿಯಾಗಿರುವ ಭೂಮಿಯನ್ನು ತಾಲೂಕು ನೋಂದಣಾಧಿಕಾರಿ ಕಚೇರಿಗಳ ಮೂಲಕ ಯಾವುದೇ ಸಂದರ್ಭದಲ್ಲಿ ತೆರವುಗೊಳಿಸಬಹುದು.

ಆದರೆ ನಕಲಿ ದಾಖಲೆ ಸೃಷ್ಟಿಸಿ ವಶಪಡಿಸಿಕೊಂಡಿರುವ ಭೂಮಿಯನ್ನು ಮತ್ತೆ ಪಡೆಯುವುದು ಕಷ್ಟಸಾಧ್ಯ ಎಂದರು. ಮೂಲ ಭೂಕಬಳಿಕೆದಾರರನ್ನು ಪತ್ತೆಹಚ್ಚಿ ಅವರ ವಿರುದ್ಧ ಕ್ರಿಮಿನಲ್  ಮೊಕದ್ದಮೆ ದಾಖಲಿಸುವ ಜತೆಗೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು. ಭೂಗಳ್ಳರಿಗೆ ಸರ್ಕಾರಿ ಭೂಮಿಯನ್ನು ನೋಂದಣಿ ಮಾಡಿಕೊಟ್ಟಂತಹ ಅಧಿಕಾರಿಗಳ ವಿರುದ್ಧವೂ ಕ್ರಿಮಿನಲ್  ಮೊಕದ್ದಮೆ ಹೂಡಬೇಕು. ಭೂಮಿ ಖರೀದಿ ಮಾಡಿರುವವರಿಗೆ ಬೇರೆಡೆ ಪುನರ್ವಸತಿ ಕಲ್ಪಿಸಬೇಕು. ಗೋಮಾಳ, ಕೆರೆ ಒತ್ತುವರಿ ಜಾಗವನ್ನು ಯಾವುದೇ ವ್ಯಕ್ತಿಗೆ ನೀಡುವಂತಿಲ್ಲ. ಅದು  ಸಾರ್ವಜನಿಕ ಉಪಯೋಗಕ್ಕೆ ಬಳಕೆಯಾಗಬೇಕು ಎಂದು ಹೇಳಿದರು.

2ಜಿ ಮಾದರಿಯಲ್ಲಿ ತನಿಖೆ ನಡೆಸಿ: ಸುಮಾರು ರು.100 ಕೋಟಿ ಮೌಲ್ಯದ ಪೋಡಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾ.ರಾಮಮೋಹನ ರೆಡ್ಡಿ ಅವರ ಬಳಿ  ಇರುವ ಸಿಡಿ ಮಾಹಿತಿಯನ್ನು ಬಹಿರಂಗಪಡಿಸಬೇಕು. ಈ ಬಗ್ಗೆ ಮುಖ್ಯ ನ್ಯಾಯಾಧೀಶರು ತನಿಖೆ ಕೈಗೊಳ್ಳಬೇಕು. ಇಲ್ಲವೇ 2ಜಿ ಹಗರಣ ಮಾದರಿಯಲ್ಲಿ ತನಿಖೆ ನಡೆಯಬೇಕು. ಆಗ  ಜನರಿಗೆ ನ್ಯಾಯಾಲಯದ ಮೇಲಿನ ನಂಬಿಕೆ ಹೆಚ್ಚಾಗಲಿದೆ ಎಂದು ಹೇಳಿದರು. ಚುನಾವಣೆಗಳಲ್ಲಿ ಹಣಬಲ, ತೋಳ್ಬಲ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೇ ಜರುಗಿದ ವಿಧಾನ ಪರಿಷತ್  ಚುನಾವಣೆಯಲ್ಲಿಯೂ ಹೆಚ್ಚುವರಿ ಸಮಯ, ವೋಟಿಂಗ್ ಮಷಿನ್‍ಗಳ ಬಳಕೆಯಿಂದ ಸಾರ್ವಜನಿಕರ ತೆರಿಗೆ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಈ ವಿಷಯವನ್ನು ಚುನಾವಣಾ ಆಯೋಗ  ಗಂಭೀರವಾಗಿ ಪರಿಗಣಿಸಬೇಕಿದ್ದು, ಅಕ್ರಮಕ್ಕೆ ಆಸ್ಪದ ನೀಡದೆ ದಕ್ಷತೆಯಿಂದ ನಡೆದುಕೊಳ್ಳಬೇಕು ಎಂದು ರಾಮಸ್ವಾಮಿ ಸಲಹೆ ನೀಡಿದರು.

ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಮಾತನಾಡಿ, ಸರ್ಕಾರ ತಾನಾಗಿಯೇ ಯಾವುದೇ ಕೆಲಸವನ್ನು ಕೈಗೊಳ್ಳದ ಪರಿಣಾಮ, ಪ್ರಸ್ತುತ ದಿನಗಳಲ್ಲಿ ಜನತಾ ಹೋರಾಟ ಅನಿವಾರ್ಯವಾಗಿದೆ ಎಂದರು. ಈ ಸಂದರ್ಭದಲ್ಲಿ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT