(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಉನ್ನತ ಮಟ್ಟಕ್ಕೇರಲು ಬಡತನ ಪ್ರೇರಣೆ

ಒಬ್ಬ ವ್ಯಕ್ತಿ ಉನ್ನತ ಮಟ್ಟಕ್ಕೆ ಏರುವಲ್ಲಿ ಆತನ ಕುಟುಂಬದ ಬಡತನವೂ ಪ್ರೇರಣೆಯಾಗುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ...

ಬೆಂಗಳೂರು; ಒಬ್ಬ ವ್ಯಕ್ತಿ ಉನ್ನತ ಮಟ್ಟಕ್ಕೆ ಏರುವಲ್ಲಿ ಆತನ ಕುಟುಂಬದ ಬಡತನವೂ ಪ್ರೇರಣೆಯಾಗುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಭಾನುವಾರ ನಗರದ ಕೌಶಿಕ್ ಮುದ್ದಾ ಅವರ `63 ರಿಜೆಕ್ಷನ್ಸ್' ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಉದ್ಯಮ ಆರಂಭಿಸುವಾಗ ಯುವ ಉದ್ಯಮಿಗಳು ಎದುರಿಸುವ ಸವಾಲುಗಳು ಹಾಗೂ ಅವುಗಳನ್ನು ಮೆಟ್ಟಿ ನಿಂತ ಅನುಭವಗಳನ್ನು ಪ್ರಬುದಟಛಿತೆಯಿಂದ ಲೇಖಕರು ಈ ಪುಸ್ತಕದಲ್ಲಿ ಬರೆದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ಉಪಲೋಕಾಯುಕ್ತ ಸುಭಾಷ್ ಬಿ.ಅಡಿ ಮಾತನಾಡಿ, ಯುವಕರಿಂದ ದೇಶದ ಬೆಳವಣಿಗೆ ಸಾಧ್ಯ. ಜೀವನದಲ್ಲಿ ಪ್ರಾಮಾಣಿಕತೆ ಮತ್ತು ಒಳ್ಳೆತನ ರೂಡಿsಸಿಕೊಳ್ಳಬೇಕು. ಸಾಧನೆ ಮಾಡಲು ಅನ್ಯ ಮಾರ್ಗವನ್ನು ಆಯ್ದುಕೊಳ್ಳದೆ ಸರಿಯಾದ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. ಸಮಾರಂಭದಲ್ಲಿ ನ್ಯಾಯಮೂರ್ತಿ ಎನ್. ಕೆ.ಪಾಟೀಲ್, ತರಬೇತಿ ಮತ್ತು ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರಾಘವೇಂದ್ರ ಔರಾದ್ಕರ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT