(ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ತಡೆಯಾಜ್ಞೆ ತೆರವಿಗೆ ಲೋಕಾ ಪೊಲೀಸರೊಂದಿಗೆ ಚರ್ಚಿಸಿ

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ತಡೆಯಾಜ್ಞೆ ತೆರವುಗೊಳಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸುವಂತೆ ಹೈಕೋರ್ಟ್ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎ.ಎಸ್. ಪೊನ್ನಣ್ಣ ನವರಿಗೆ ಹೈಕೋರ್ಟ್ ಸೂಚನೆ ನೀಡಿದೆ...

ಬೆಂಗಳೂರು: ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ತಡೆಯಾಜ್ಞೆ ತೆರವುಗೊಳಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸುವಂತೆ ಹೈಕೋರ್ಟ್ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎ.ಎಸ್. ಪೊನ್ನಣ್ಣ ನವರಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿನ ಒಂದು ವರ್ಷ ಕಳೆದರೂ ವಿಚಾರಣೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ನ್ಯಾ.ಎ.ಎನ್. ವೇಣುಗೋಪಾಲ್‍ಗೌಡ ಅವರಿದ್ದ ನ್ಯಾಯಪೀಠ, ಈ ಸಂಬಂಧ ಜನವರಿ 18 ರಿಂದ 23ರೊಳಗೆ ಲೋಕಾಯುಕ್ತ ಪೊಲೀಸ್ ವಿಭಾಗದ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸುವಂತೆ ಸೂಚಿಸಿದೆ. ಪ್ರಕರಣದ ವಿಚಾರಣೆ ವೇಳೆ ಹಾಜರಿದ್ದ ಪೊನ್ನಣ್ಣ, ಭ್ರಷ್ಟಾಚಾರ ಆರೋಪಗಳ ಸಂಬಂಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ 21 ಪ್ರಕರಣಗಳಿಗೆ ಹೈಕೊರ್ಟ್ ತಡೆ ನೀಡಿದೆ.

ಲೋಕಾಯುಕ್ತ ಪೊಲೀಸ್ ವಿಭಾಗದಲ್ಲಿ 105 ಹುದ್ದೆಗಳು ಖಾಲಿಯಿವೆ. ಅದರಲ್ಲಿ 5 ಪೊಲೀಸ್ ಅಧೀಕ್ಷಕರು, 24 ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಹುದ್ದೆಗಳು ಖಾಲಿಯಿವೆ ಎಂದು ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, 21 ಪ್ರಕರಣಗಳಲ್ಲಿ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು, ಆ ಪ್ರಕರಣಗಳು ತ್ವರಿತವಾಗಿ ಇತ್ಯರ್ಥಪಡಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆ ನಡೆಸಿ ತೀರ್ಮಾನಿಸಬೇಕು. ಮುಂದಿನ ವಿಚಾರಣೆ ವೇಳೆ ಸಭೆಯಲ್ಲಿ ಕೈಗೊಂಡ ತೀರ್ಮಾನದ ಬಗ್ಗೆ ಮಾಹಿತಿ ನೀಡಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT